ವೀಡಿಯೊ…| ರಾಜ್ಯಸಭಾ ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾಮೂರ್ತಿ..: ವೀಕ್ಷಿಸಿ

ನವದೆಹಲಿ: ಲೇಖಕಿ ಹಾಗೂ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾ ಮೂರ್ತಿ ಗುರುವಾರ (ಮಾರ್ಚ್ 14) ರಾಜ್ಯಸಭೆಯ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜ್ಯಸಭೆ ಚೇರ್ಮನ್‌ ಜಗದೀಪ ಧನಕರ್‌ ಅವರ ಚೇಂಬರ್‌ನಲ್ಲಿ ನಡೆದ ಸಮಾರಂಭದಲ್ಲಿ ಜಗದೀಪ್‌ ಧನಕರ್‌ ಅವರು ಪ್ರಮಾಣ ವಚನ ಬೋಧಿಸಿದರು. ಸುಧಾಮೂರ್ತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೇಂದ್ರ ಸಚಿವ ಪೀಯೂಷ್‌ ಗೋಯಲ್‌, ಅವರ ಪತಿ ಮತ್ತು ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಸಹ ಪಾಲ್ಗೊಂಡಿದ್ದರು.
ಇದಕ್ಕೂ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಮಹಿಳಾ ದಿನದಂದು ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದಾಗಿ ಘೋಷಿಸಿದರು, ಸಾಮಾಜಿಕ ಕೆಲಸ, ಲೋಕೋಪಕಾರ ಮತ್ತು ಶಿಕ್ಷಣಕ್ಕೆ ಅವರ ಮಹತ್ವದ ಕೊಡುಗೆಗಳನ್ನು ಶ್ಲಾಘಿಸಿದರು. ಅವರ ನಾಮನಿರ್ದೇಶನವು ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೈಲೈಟ್ ಮಾಡಿದರು.

ಪದ್ಮಶ್ರೀ, ಪದ್ಮಭೂಷಣ ಪುರಸ್ಕೃತ…
ಸುಧಾ ಮೂರ್ತಿ ಅವರು 19 ಆಗಸ್ಟ್ 1950 ರಂದು ಹಾವೇರಿಯ ಶಿಗ್ಗಾಂವಿಯಲ್ಲಿ ಜನಿಸಿದರು. ಅವರ ತಂದೆ ಡಾ.ಆರ್.ಎಚ್. ಕುಲಕರ್ಣಿ ಮತ್ತು ತಾಯಿ ವಿಮಲಾ ಕುಲಕರ್ಣಿ. ಸುಧಾ ಬಿ.ವಿ.ಬಿ. ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿಯಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದ್ದಾರೆ. ನಂತರ ಅವರು ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನಿಂದ (ಬೆಂಗಳೂರು) ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

ಸುಧಾ ಮೂರ್ತಿ ಅವರು 1996 ರಲ್ಲಿ ಇನ್ಫೋಸಿಸ್ ಫೌಂಡೇಶನ್ ಅನ್ನು ಪ್ರಾರಂಭಿಸಿದರು. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಕೆಲಸ ಮಾಡುತ್ತಿದ್ದಾರೆ. ಇದಕ್ಕೂ ಮೊದಲು ಅವರು ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿಯೂ ಕೆಲಸ ಮಾಡಿದ್ದರು.
ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷರಾದ 73 ವರ್ಷದ ಸುಧಾಮೂರ್ತಿ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ಅವರಿಗೆ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪ್ರಶಸ್ತಿಯನ್ನು ನೀಡಲಾಗಿದೆ. ಅವರು ತಮ್ಮ ಜೀವನದುದ್ದಕ್ಕೂ ಸಮಾಜ ಸೇವೆ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಅವರಿಗೆ 2006 ರಲ್ಲಿ ಪದ್ಮಶ್ರೀ ಮತ್ತು 2023 ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement