ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ : ಶುಕ್ರವಾರದಿಂದಲೇ ಜಾರಿ

ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದೇಶಾದ್ಯಂತ ಲೀಟರಿಗೆ ತಲಾ 2 ರೂಪಾಯಿ ಕಡಿಮೆ ಮಾಡಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಈ ಕುರಿತು ಅವರು ಎಕ್ಸ್‌ ನಲ್ಲಿ ಮಾಹಿತಿ ನೀಡಿದ್ದಾರೆ. ಲೋಕಸಭೆ ಚುನಾವಣೆ ವಾರಗಳ ಮೊದಲು ಈ ಘೋಷಣೆ ಮಾಡಲಾಗಿದ್ದು, ಪರಿಷ್ಕೃತ ಬೆಲೆಯು ಮಾರ್ಚ್ 15(ಶುಕ್ರವಾರ) ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರಲಿದೆ. ಇದರಿಂದಾಗಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆಯು ಲೀಟರ್‌ಗೆ ₹94.72 ಹಾಗೂ ಡೀಸೆಲ್ ಬೆಲೆ ₹87.62ರಷ್ಟಾಗಲಿದೆ ಎಂದು ವರದಿಯಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 2 ರೂ. ಇಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕೋಟ್ಯಂತರ ಭಾರತೀಯರ ಕುಟುಂಬದ ಕಲ್ಯಾಣ ಮತ್ತು ಅನುಕೂಲತೆ ಯಾವಾಗಲೂ ತಮ್ಮ ಗುರಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ,’ ಎಂದು ಸಚಿವರು ಹೇಳಿದ್ದಾರೆ.
ಮಾರ್ಚ್ 14, 2024 ರಂದು, ರೂಪಾಯಿ ಲೆಕ್ಕದಲ್ಲಿ, ಭಾರತದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ಸರಾಸರಿ ₹ 94 ರೂ. ಆದರೆ ಇಟಲಿಯಲ್ಲಿ ₹ 168.01- ಅಂದರೆ 79% ಹೆಚ್ಚು; ಫ್ರಾನ್ಸ್‌ನಲ್ಲಿ ₹ 166.87 ಅಂದರೆ 78% ಹೆಚ್ಚು; ಜರ್ಮನಿಯಲ್ಲಿ ₹ 159.57 ಅಂದರೆ 70% ಹೆಚ್ಚು ಸ್ಪೇನ್‌ನಲ್ಲಿ ₹ 145.13 ಅಂದರೆ 54% ಹೆಚ್ಚು” ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಟಿಎಂಸಿ ಇಬ್ಭಾಗ ; ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಉಚ್ಚಾಟಿತ ಶಾಸಕ ರಿತಬ್ರತ ಬೆಂಬಲಿಸಿ ಸ್ಪೀಕರ್‌ಗೆ 58 ಶಾಸಕರ ಹಕ್ಕು ಸಲ್ಲಿಕೆ !

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement