ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ತನಿಖೆ ಸಿಐಡಿಗೆ

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ.
ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲು ಆದೇಶಿಸಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.
ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಬಾಲಕಿ ತಾಯಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಯಡಿಯೂರಪ್ಪ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ಗುರುವಾರ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥರು ಇರಬಹುದು ಎಂದು ಕೆಲವರು ಹೇಳುತ್ತಿದ್ದಾರೆ ಎಂದೂ ಗೃಹ ಸಚಿವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ : ತಾಯಿ-ಮಗು ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement