ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ…

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಪ್ರತಿಕ್ರಿಯಿಸಿದ್ದು, ಇದೊಂದು ನಿರಾಧಾರ ಆರೋಪವಾಗಿದೆ ಎಂದು ತಳ್ಳಿಹಾಕಿದ್ದಾರೆ. ಹಾಗೂ ತನಿಖೆಗೆ ಸಹಕರಿಸಲು ಸಿದ್ಧ ಎಂದು ಹೇಳಿದ್ದಾರೆ.
ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಯಿ ಮತ್ತು ಮಗಳು ಈ ಹಿಂದೆ ಅನೇಕ ಬಾರಿ ತಮ್ಮನ್ನು ಭೇಟಿ ಮಾಡುವ ಪ್ರಯತ್ನ ಮಾಡಿದ್ದರು. ಒಂದೂವರೆ ತಿಂಗಳ ಹಿಂದೆ ಅವರು ಬಂದಾಗ ಅಳುತ್ತಿರುವುದನ್ನು ನೋಡಿದೆ. ಆಗ ಮಾತನಾಡಿಸಿದೆ. ತಮಗೆ ಕೆಲವು ಸಮಸ್ಯೆಗಳಿದ್ದು, ನ್ಯಾಯ ದೊರಕಿಸಿಕೊಡಬೇಕು ಎಂದು ಹೇಳಿದರು. ತಕ್ಷಣವೇ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಕರೆ ಮಾಡಿ ತವಿಷಯ ತಿಳಿಸಿದೆ. ಆದಾಗ್ಯೂ, ಇದರ ನಂತರ, ಅವರು ಅಲ್ಲಿಯೇ ನನ್ನ ವಿರುದ್ಧ ಆರೋಪಗಳನ್ನು ಮಾಡಲು ಪ್ರಾರಂಭಿಸಿದರು, ಆಗ ಮಹಿಳೆಗೆ ಏನೋ ಸಮಸ್ಯೆ ಇರಬಹುದು ಎಂದು ನಾನು ಭಾವಿಸಿದೆ. ಹಾಗೂ ಬಳಿಕ ಅವರನ್ನ ಕಮಿಷನರ್​ ಬಳಿ ಕಳಿಸಿಕೊಟ್ಟೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಈ ಬೆಳವಣಿಗೆ ಬಗ್ಗೆ ಯಡಿಯೂರಪ್ಪ ಅವರು ತಮ್ಮ ನಿರಾಸೆ ವ್ಯಕ್ತಪಡಿಸಿದ್ದಾರೆ, “ನನಗೆ ಕೆಟ್ಟದ್ದೆನ್ನಿಸುವುದು ಏನೆಂದರೆ ನಾವು ಜನರಿಗೆ ಸಹಾಯ ಮಾಡಲು ಪ್ರಯತ್ನಿಸುತ್ತೇವೆ. ಇಲ್ಲಿ ಉಪಕಾರ ಮಾಡಿದರೆ ಈಗ ನನ್ನ ಮೇಲೆಯೇ ಹೀಗೆ ಆರೋಪ ಮಾಡಿದ್ದಾರೆ. ನಾನು ಇದನ್ನು ನಿರೀಕ್ಷಿಸಿರಲಿಲ್ಲ ಎಂದು ಹೇಳಿದರು.
ಇದರ ಹಿಂದೆ ರಾಜಕೀಯ ಉದ್ದೇಶ ಇದೆ ಎಂದು ನಾನು ಈಗಲೇ ಹೇಳುವುದಿಲ್ಲ ಎಂದು ಹೇಳಿದರು.ಯಾರೋ ಒಬ್ಬ ಹೆಣ್ಣು ಮಗಳು ದೂರು ಕೊಟ್ಟಿದ್ದಾರೆ. ಇರಲಿ ಎದುರಿಸೋಣ ಎಂದರು.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement