ರಾಜ್ಯದಲ್ಲಿ 247 ಪಿಡಿಒ ಹುದ್ದೆ ಭರ್ತಿಗೆ ಕೆಪಿಎಸ್‌ಸಿ ಅಧಿಸೂಚನೆ ಪ್ರಕಟ

ಬೆಂಗಳೂರು: ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) 247 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಅರ್ಜಿಯನ್ನು ಏಪ್ರಿಲ್ 15 ರಿಂದ ಸಲ್ಲಿಸಬಹುದು.
150 ಹುದ್ದೆಗಳು ಉಳಿಕೆ ಮೂಲ ವೃಂದಕ್ಕೆ ಸೇರಿದೆ, ಹಾಗೂ 97 ಹುದ್ದೆಗಳು ಹೈದ್ರಾಬಾದ್‌-ಕರ್ನಾಟಕ ವೃಂದಕ್ಕೆ ಸೇರಿವೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ವೇತನ ಶ್ರೇಣಿ ರೂ.37,900-70,850 ರೂ.ಗಳಾಗಿದೆ.
ಏಪ್ರಿಲ್‌ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಮೇ 15ಕ್ಕೆ ಮುಕ್ತಾಯವಾಗಲಿದೆ ಎಂದು ಆಯೋಗವು ಅಧಿಸೂಚನೆಯಲ್ಲಿ ತಿಳಿಸಿದೆ.
ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುತ್ತದೆ..
ವಿದ್ಯಾರ್ಹತೆ : ಭಾರತದ ಕಾನೂನಿನ್ವಯ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ ವಿದ್ಯಾರ್ಹತೆ ಪಡೆದಿರಬೇಕು.

ವಯೋಮಿತಿ : ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗಕ್ಕೆ ಕನಿಷ್ಠ ವಯಸ್ಸು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಗಳ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾರಿ, ಪರಿಶಿಷ್ಟ ಪಂಗಡಗಳು ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ವಯಸ್ಸನ್ನು ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹ 600, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹ 300, ಮಾಜಿ ಸೈನಿಕರಿಗೆ ₹ 50 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.
ಪ್ರಮುಖ ದಿನಾಂಕಗಳು
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 15-04-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-05-2024
ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement