ಗುತ್ತಿಗೆದಾರನ ಮೇಲೆ ಹಲ್ಲೆ: ಕಾಂಗ್ರೆಸ್ ಶಾಸಕನ ವಿರುದ್ಧ ಪ್ರಕರಣ ದಾಖಲು

ತುಮಕೂರು : ಗುತ್ತಿಗೆದಾರರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್‌.ಆರ್. ಶ್ರೀನಿವಾಸ ವಿರುದ್ಧ ಶನಿವಾರ ಎಫ್‌ಐಆರ್ ದಾಖಲಾಗಿದೆ.
ರವಿಕುಮಾರ ಎಂಬ ಗುತ್ತಿಗೆದಾರರು ರವಿಕುಮಾರ್ ತುಮಕೂರಿನ ತಿಲಕ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಲ್ಲೆಯ ನಂತರ ಅವರು ಒಂದು ದಿನ ಆಸ್ಪತ್ರೆಯಲ್ಲಿದ್ದರು. ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರಿನ ಆಧಾರದ ಮೇಲೆ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ವಿರುದ್ಧ ಇದೀಗ ಎಫ್ಐಆರ್ ದಾಖಲು ಮಾಡಲಾಗಿದೆ.
ಟೆಂಡರ್ ರದ್ದುಪಡಿಸಿದ ಹಿನ್ನೆಲೆಯಲ್ಲಿ ಗುರುವಾರ ತುಮಕೂರಿನ ಗುಬ್ಬಿಯಲ್ಲಿರುವ ಪಿಡಬ್ಲ್ಯುಡಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ರವಿಕುಮಾರ ಅವರ ಮೇಲೆ ಶಾಸಕ ಶ್ರೀನಿವಾಸ್ ಅವರು 10 ಮಂದಿ ಬೆಂಬಲಿಗರ ಜತೆಗೂಡಿ ಹಲ್ಲೆ ಮಾಡಿ, ಒದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.
ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), ಸೆಕ್ಷನ್ 504 (ಶಾಂತಿ ಭಂಗ ಪ್ರಚೋದಿಸುವುದು), ಸೆಕ್ಷನ್ 149 ), ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), ಮತ್ತು ಸೆಕ್ಷನ್ 363 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement