ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್​ 21ರಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ : ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ಮಾರ್ಚ್​ 21ರಿಂದ ಮೂರು ದಿನಗಳ ಕಾಲ ರಾಜ್ಯದ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಹಾಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಒಣಹವೆ ಮುಂದುವರೆಯಲಿದೆ ಎಂದು ಹೇಳಿದೆ. .
ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ಬೆಂಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement