ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯತ್ವ ನನಗೆ ಬೇಡ : ಸಿಎಂ, ಡಿಸಿಎಂಗೆ ಅಕ್ಕಯ್ ಪದ್ಮಶಾಲಿ ಪತ್ರ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯತ್ವದಿಂದ ತಮ್ಮನ್ನು ಕೈಬಿಡುವಂತೆ ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಮನವಿ ಮಾಡಿದ್ದಾರೆ.
“ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ ಹಾಗೂ ರಾಜಕೀಯದ ವಿಚಾರದ ನನ್ನ ಹೋರಾಟವು ಪ್ರಪಂಚದಾದ್ಯಂತ ಪಸರಿಸಿದೆ. ನಮ್ಮ ಸಮುದಾಯದ ಸಂಪೂರ್ಣ ಶ್ರೇಯೋಭಿವೃದ್ಧಿಗಾಗಿ ಹಾಗೂ ಸಾಮಾಜಿಕ ಬಹಿಷ್ಕಾರದ ವಿರುದ್ಧ ನನ್ನ ಹೋರಾಟ ಮುಂದುವರಿಸಲಿದ್ದೇನೆ” ಎಂದು ಅವರು ತಿಳಿಸಿದ್ದಾರೆ.
ನನ್ನನ್ನು ಮುಂಬರುವ ವಿಧಾನ ಪರಿಷತ್ತಿನ ಸದಸ್ಯರನ್ನಾಗಿ ಅಥವಾ ರಾಜ್ಯಸಭೆಗೆ ಸದಸ್ಯರನ್ನಾಗಿಸುವುದನ್ನು ಪರಿಗಣಿಸಬೇಕು. ಇದರ ಬಗ್ಗೆ ತಾವುಗಳು ವಿಶೇಷ ಕಾಳಜಿವಹಿಸಿ ಕ್ರಮವಹಿಸಬೇಕಾಗಿ ವಿನಂತಿಸುತ್ತಿದ್ದೇನೆ ಎಂದು ಕೂಡ ಇದೇ ಪತ್ರದಲ್ಲಿ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿ ಮಾಡುವ ಮುನ್ನ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ಶುಕ್ರವಾರ ಆದೇಶ ಹೊರಡಿಸಿತ್ತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement