ತೆಲಂಗಾಣ ರಾಜ್ಯಪಾಲರ ಹುದ್ದೆಗೆ ತಮಿಳಿಸೈ ಸೌಂದರರಾಜನ್ ರಾಜೀನಾಮೆ

ಹೈದರಾಬಾದ್‌ : ಲೋಕಸಭೆ ಚುನಾವಣೆಗೆ ಮುನ್ನ ತೆಲಂಗಾಣ ರಾಜ್ಯಪಾಲ ಮತ್ತು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ತಮಿಳಿಸೈ ಸೌಂದರರಾಜನ್ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯನ್ನು ಪುದುಚೇರಿ ರಾಜಭವನ ಖಚಿತಪಡಿಸಿದೆ. ವರದಿಗಳ ಪ್ರಕಾರ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ.
“ತೆಲಂಗಾಣದ ಗೌರವಾನ್ವಿತ ರಾಜ್ಯಪಾಲರು ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಡಾ ತಮಿಳಿಸೈ ಸೌಂದರರಾಜನ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಯನ್ನು ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಸಲ್ಲಿಸಲಾಗಿದೆ” ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ತಮಿಳಿಸೈ ಸೌಂದರರಾಜನ್ ಯಾರು?
ತಮಿಳಿಸೈ ಸೌಂದರರಾಜನ್ ತಮಿಳುನಾಡು ಬಿಜೆಪಿ ಮಾಜಿ ಮುಖ್ಯಸ್ಥರು. ಅವರನ್ನು ಸೆಪ್ಟೆಂಬರ್ 2019 ರಲ್ಲಿ ತೆಲಂಗಾಣ ರಾಜ್ಯಪಾಲರನ್ನಾಗಿ ನೇಮಿಸಲಾಯಿತು. ಕಿರಣ್ ಬೇಡಿ ಅವರನ್ನು ಹುದ್ದೆಯಿಂದ ತೆಗೆದ ನಂತರ ಅವರಿಗೆ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ನೀಡಲಾಯಿತು.
ಹಿರಿಯ ಕಾಂಗ್ರೆಸ್ಸಿಗರಾದ ಕುಮಾರಿ ಅನಂತನ್ ಅವರ ಪುತ್ರಿ ಸೌಂದರರಾಜನ್ ಅವರು ರಾಜ್ಯಪಾಲರಾಗಿ ಕಳುಹಿಸುವ ಮೊದಲು ಎರಡು ದಶಕಗಳಿಂದ ಬಿಜೆಪಿಯಲ್ಲಿದ್ದರು. ಪ್ರಭಾವಿ ನಾಗರ್ ಸಮುದಾಯದಿಂದ ಬಂದ ತಮಿಳಿಸೈ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಡಿಎಂಕೆಯ ಕನಿಮೋಳಿ ವಿರುದ್ಧ ತೂತುಕುಡಿಯಲ್ಲಿ ಸೋತಿದ್ದರು.

ಪ್ರಮುಖ ಸುದ್ದಿ :-   ಮುಂಬೈ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement