ಕರ್ನಾಟಕದಲ್ಲಿ ಇಂದಿನಿಂದ ಮೂರ್ನಾಲ್ಕು ದಿನಗಳ ಕಾಲ ಮಳೆ ಬೀಳುವ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗಿನಿಂದ ಕೂಡಿದ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್‌ 18 ರಂದು ಉತ್ತರ ಒಳನಾಡಿನ ಬೀದರ, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್‌ 21 ರಂದು ಧಾರವಾಡ, ಬೆಳಗಾವಿ, ಬೀದರ, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನಲ್ಲಿಯೂ ಮಳೆ
ಮಾರ್ಚ್‌ 20 ರಿಂದ 24ರ ವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಚಾಮರಾಜನಗರ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯಲ್ಲಿಯೂ ಮಳೆ ಸಾಧ್ಯತೆ…
ಕರಾವಳಿಯಲ್ಲಿ ಬೇಸಿಗೆ ಮಳೆ ನಿರೀಕ್ಷೆ ಮಾಡಬಹುದು, ಮಾರ್ಚ್‌ 22 ರ ಬಳಿಕ ಕರಾವಳಿ ಜಿಲ್ಲೆಗಳಲ್ಲಿಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಾರ್ಚ್‌ 20ರ ಬಳಿಕ 23ರ ವರೆಗೆ ರಾಜ್ಯದ ನಾನಾ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ತಿಳಿಸಿದೆ.
ರಾಜ್ಯದಲ್ಲಿ ಕಳೆದ ವರ್ಷ ವಾಡಿಕೆಗಿಂತ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ತೀವ್ರ ಬರಗಾಲ ಎದುರಾಗಿದೆ. ಕಳೆದ ವರ್ಷ ಎಲ್‌ ನಿನೋ ಪ್ರಭಾವದಿಂದ ಮಳೆ ಕಡಿಮೆಯಾಗಿತ್ತು. ಜೂನ್‌ ವೇಳೆಗೆ ಎಲ್‌ ನಿನೋ ಪ್ರಭಾವ ತಗ್ಗಲಿದೆ. ಹೀಗಾಗಿ ಮುಂಗಾರು ಉತ್ತಮವಾಗಲಿದೆ ಎಂದು ಹವಾಮಾನ ಇಲಾಖೆ ನಿರೀಕ್ಷಿಸಿದೆ.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement