ಲೋಕಸಭೆ ಚುನಾವಣೆ : 6 ರಾಜ್ಯಗಳ ಗೃಹ ಕಾರ್ಯದರ್ಶಿಗಳು, ಪಶ್ಚಿಮ ಬಂಗಾಳದ ಪೊಲೀಸ್ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಹಲವು ರಾಜ್ಯಗಳಲ್ಲಿ ಹಲವಾರು ಪ್ರಮುಖ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಭಾರತೀಯ ಚುನಾವಣಾ ಆಯೋಗ(ಇಸಿಐ) ಸೋಮವಾರ ಸೂಚನೆ ನೀಡಿದೆ.
ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆ ಮಾಡಿ ಚುನಾವಣಾ ಆಯೋಗವು ಆದೇಶಿಸಿದೆ. ಹೆಚ್ಚುವರಿಯಾಗಿ, ಚುನಾವಣಾ ಸಮಿತಿಯು ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕ, ರಾಜ್ಯದ ಮುಖ್ಯ ಪೋಲೀಸ್ ಅವರನ್ನು ವರ್ಗಾವಣೆ ಮಾಡುವಂತೆ ಸೂಚನೆ ನೀಡಿದೆ.

ಅಲ್ಲದೆ, ಆಯಾ ಮುಖ್ಯಮಂತ್ರಿಗಳ ಕಚೇರಿಗಳಲ್ಲಿ ಉಸ್ತುವಾರಿ ವಹಿಸಿದ್ದ ಮಿಜೋರಾಂ ಮತ್ತು ಹಿಮಾಚಲ ಪ್ರದೇಶದ ಸಾಮಾನ್ಯ ಆಡಳಿತ ಇಲಾಖೆಯ ಕಾರ್ಯದರ್ಶಿಯನ್ನು ಸಹ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ನೇತೃತ್ವದ ಚುನಾವಣಾ ಆಯೋಗವು ಲೋಕಸಭೆ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ ಕೆಲವೇ ದಿನಗಳಲ್ಲಿ ಬೃಹನ್‌ ಮುಂಬೈ ಮುನ್ಸಿಪಲ್ ಕಮಿಷನರ್ ಇಕ್ಬಾಲ್ ಸಿಂಗ್ ಚಾಹಲ್, ಹೆಚ್ಚುವರಿ ಆಯುಕ್ತರು ಮತ್ತು ಉಪ ಆಯುಕ್ತರನ್ನು ವರ್ಗಾವಣೆ ಮಾಡಲು ಆದೇಶಿಸಿದೆ.

ಪ್ರಮುಖ ಸುದ್ದಿ :-   ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಮುಂಬೈ 26/11 ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ವಾದಿಸಿದ್ದ ಉಜ್ವಲ್ ನಿಕಮ್ ಕಣಕ್ಕಿಳಿಸಿದ ಬಿಜೆಪಿ

ಇದಲ್ಲದೆ, ಮಹಾರಾಷ್ಟ್ರದ ಇತರ ಕಾರ್ಪೊರೇಷನ್‌ಗಳಾದ್ಯಂತ ಇದೇ ರೀತಿಯ ಸ್ಥಾನದಲ್ಲಿರುವ ಎಲ್ಲಾ ಪುರಸಭೆಯ ಆಯುಕ್ತರು, ಹೆಚ್ಚುವರಿ ಅಥವಾ ಉಪ ಮುನ್ಸಿಪಲ್ ಕಮಿಷನರ್‌ಗಳನ್ನು ವರ್ಗಾಯಿಸಲು ಮುಖ್ಯ ಕಾರ್ಯದರ್ಶಿಗೆ ಕಡ್ಡಾಯಗೊಳಿಸಿದೆ.
ಮೂರು ವರ್ಷಗಳನ್ನು ಪೂರೈಸಿರುವ ಅಥವಾ ತಮ್ಮ ತವರು ಜಿಲ್ಲೆಗಳಲ್ಲಿ ಠಿಕಾಣಿ ಹೂಡಿರುವ ಚುನಾವಣಾ ಸಂಬಂಧಿತ ಕಾರ್ಯಗಳಲ್ಲಿ ತೊಡಗಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಲೋಕಸಭೆ ಚುನಾವಣೆ 2024
ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ (ಮಾರ್ಚ್ 16) ತಿಳಿಸಿದ್ದಾರೆ.
ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1 ರಂದು ನಡೆಯಲಿದೆ. ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ವಿಧಾನಸಭೆ ಚುನಾವಣೆಗಳು ಏಪ್ರಿಲ್ 19 ರಂದು ಮತ್ತು ಆಂಧ್ರಪ್ರದೇಶದಲ್ಲಿ ಮೇ 13 ರಂದು ನಡೆಯಲಿದೆ. ಒಡಿಶಾ ವಿಧಾನಸಭೆಗೆ ಚುನಾವಣೆ ಮೇ 13, ಮೇ 20, ಮೇ 25 ಮತ್ತು ಜೂನ್ 1 ರಂದು ನಾಲ್ಕು ಹಂತಗಳಲ್ಲಿ ನಡೆಯಲಿದೆ. 26 ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಲಿದೆ ಎಂದು ಇಬ್ಬರು ನೂತನ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement