ಬೆಂಗಳೂರು : ಬೆಳ್ಳಂದೂರು ಶಾಲೆ ಬಳಿ ಸ್ಫೋಟಕ ವಸ್ತುಗಳು ಪತ್ತೆ ; ಆತಂಕ

ಬೆಂಗಳೂರು : ಬೆಂಗಳೂರಿನ ಶಾಲೆಯೊಂದರ ಮುಂಭಾಗ ಜಮೀನಿನಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದೆ ಎಂದು ವರದಿಯಾಗಿದ್ದು, ಇದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಭಾಗದ ಖಾಲಿ ಜಮೀನಿನಲ್ಲಿ, ಜಿಲೆಟಿನ್ ಕಡ್ಡಿ, ಡಿಟೋನೇಟರ್​​ ಹಾಗೂ ಇತರ ಕೆಲವು ಸ್ಫೋಟಕಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಸ್ಫೋಟಕಗಳನ್ನು ಟ್ರ್ಯಾಕ್ಟರ್‌ ಒಂದರಲ್ಲಿ ಇಟ್ಟಿರುವುದು ಪತ್ತೆಯಾಗಿದೆ.
ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳನ್ನು ಸ್ಫೋಟಿಸಲು ಸ್ಫೋಟಕಗಳನ್ನು ಇಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದರೂ ಆದರೆ ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದೆ ಎಂದು ಹೇಳಲಾಗಿದೆ. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತರಾಗಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ತನಿಖೆ ನಡೆಯುತ್ತಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ 400 ಪಶುವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜೂನ್‌ 24 ಕೊನೆಯ ದಿನ

ನಿಮ್ಮ ಕಾಮೆಂಟ್ ಬರೆಯಿರಿ

advertisement