ಬೆಂಗಳೂರು: ಬೆಂಗಳೂರಿನ ನಗರತಪೇಟೆಯಲ್ಲಿ ಲೌಡ್ ಸ್ಪೀಕರಿನಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೆ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣದ ಬಗ್ಗೆ ಸಚಿವ ದಿನೇಶ ಗುಂಡೂರಾವ್ ಸ್ಪಷ್ಟನೆ ನೀಡಿದ್ದು, ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ ಎಂದು ತಿಳಿಸಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಚೋದನೆಗೆ ಒಳಗಾಗದೆ ವಿವೇಚನೆಯಿಂದ ಯೋಚಿಸಿ. ಲಭ್ಯವಾದ ಎಫ್‌ಐಆರ್ ಪ್ರತಿ ಮತ್ತು ಅಂಗಡಿ ಮಾಲೀಕ ಮುಖೇಶ ಅವರು ಕೊಟ್ಟಿರುವ ಕೈ ಬರಹದ ದೂರಿನಲ್ಲಿ ಎಲ್ಲಿಯೂ ನಮಾಜ್ ಅಥವಾ ಆಝಾನ್ ಸಮಯದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಉಲ್ಲೇಖಿಸಿಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿ ನಾಯಕರು ಆರೋಪಿಸಿದಂತೆ ಪ್ರಕರಣದ ಆರೋಪಿಗಳಲ್ಲಿ ಮುಸ್ಲಿಮರು ಮಾತ್ರ ಇಲ್ಲ. ಇಬ್ಬರು ಹಿಂದೂಗಳು ಆರೋಪಿಗಳಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರಣೆ ಮತ್ತು ಸ್ಪಷ್ಟೀಕರಣವನ್ನು ತನಿಖೆಯ ಬಳಿಕ ಪೊಲೀಸರು ತಿಳಿಸಬೇಕಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು ಹಲಸೂರು ಗೇಟ್ ಠಾಣೆ ವ್ಯಾಪ್ತಿಯನಗರತಪೇಟೆಯಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೆ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ನಜರತ್ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ಮುಖೇಶ ಎಂಬುವವರು ಮೊಬೈಲ್ ಸರ್ವೀಸ್ ಅಂಗಡಿ ಹೊಂದಿದ್ದು, ಭಾನುವಾರ ಸಂಜೆ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿತ್ತು. ಘಟನೆ ಸಂಬಂಧ ಭಾನುವಾರ ರಾತ್ರಿ 10:30ಕ್ಕೆ ಕಬ್ಬನ್‌ಪೇಟೆ ನಿವಾಸಿ ಮುಖೇಶ್ ಅವರು, ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ ಜಗಳಕ್ಕೆ ಬಂದಿದ್ದರು. ಅಂಗಡಿಯಿಂದ ನನ್ನನ್ನು ಹೊರಗೆಳೆದು ಹಲ್ಲೆ ನಡೆಸಿದರು ಎಂದು ಮಾಧ್ಯಮಗಳ ಮುಂದೆ ಹೇಳಿದ್ದರು. ಬಿಜೆಪಿ ಸಹ ಈ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ