ರಾಜ್ಯದ ಹಲವೆಡೆ ಮೂರು ದಿನ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಸುಡು ಬಿಸಿಲ ಬೇಗೆ ಜಾಸ್ತಿಯಾಗಿದ್ದು, ಜೊತೆಗೆ ಜಲ ಕ್ಷಾಮವೂ ಎದುರಾಗಿದೆ ಜನ ಹೈರಾಣಾಗಿದ್ದಾರೆ. ಈ ಮಧ್ಯೆ ಕರ್ನಾಟಕದ ಕೊಡಗು, ಬೀದರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಕೊಂಚ ಮಳೆ ಆರಂಭವಾಗಿದೆ.
ಈ ಮಧ್ಯೆ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಮಾರ್ಚ್‌ ೨೧ರಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ರಾಮನಗರ ಮತ್ತು ಬೆಂಗಳೂರು ಸೇರಿದಂತೆ ಜಿಲ್ಲೆಗಳ ಅಲ್ಲಲ್ಲಿ ಮಾರ್ಚ್‌ ೨೧ರಿಂದ ೨೩ರ ವರೆಗೆ ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

5 / 5. 3

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

ನಿಮ್ಮ ಕಾಮೆಂಟ್ ಬರೆಯಿರಿ

advertisement