ಲೋಕಸಭೆ ಚುನಾವಣೆ: ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ ; ಪಿಎಂಕೆಗೆ 10 ಸ್ಥಾನಗಳು

ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಗೆ ತಮಿಳುನಾಡಿನ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದ ಜೊತೆ ಬಿಜೆಪಿ ಮಂಗಳವಾರ ತನ್ನ ಚುನಾವಣಾ ಪೂರ್ವ ಮೈತ್ರಿಯನ್ನು ಅಂತಿಮಗೊಳಿಸಿದೆ. ಮೈತ್ರಿಯ ಸೀಟು ಹಂಚಿಕೆಯ ಸೂತ್ರದ ಪ್ರಕಾರ, ಪಿಎಂಕೆಗೆ ತಮಿಳುನಾಡಿನಲ್ಲಿ 10 ಲೋಕಸಭಾ ಸ್ಥಾನಗಳನ್ನು ನೀಡಲಾಗಿದೆ..
ಪಿಎಂಕೆ ಪಕ್ಷವು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ)ಕ್ಕೆ ಸೇರ್ಪಡೆಗೊಳ್ಳುವ ಮತ್ತು ರಾಜ್ಯದಲ್ಲಿ ಸಂಸತ್ತಿನ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ ಒಂದು ದಿನದ ನಂತರ ಈ ನಿರ್ಧಾರ ಬಂದಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಿಎಂಕೆ ಅಧ್ಯಕ್ಷ ಅನ್ಬುಮಣಿ ರಾಮದಾಸ್, “ದೇಶದ ಹಿತದೃಷ್ಟಿಯಿಂದ ಮತ್ತು ಪ್ರಧಾನಿ ಮೋದಿಯವರ ಆಡಳಿತ ಮುಂದುವರಿಯಬೇಕು ಎಂದು ನಾವು ಎನ್‌ಡಿಎ ಜೊತೆ ಕೈಜೋಡಿಸಲು ನಿರ್ಧರಿಸಿದ್ದೇವೆ, ಈ ನಿರ್ಧಾರವು ಜನರಲ್ಲಿ ಬದಲಾವಣೆಯನ್ನು ತರುತ್ತದೆ ಎಂದು ನಾವು ನಂಬುತ್ತೇವೆ. ಪ್ರಸ್ತುತ ರಾಜಕೀಯ ಸನ್ನಿವೇಶದಿಂದ ಅತೃಪ್ತರಾಗಿರುವ ತಮಿಳುನಾಡು ಕುತೂಹಲದಿಂದ ಇದನ್ನು ನಿರೀಕ್ಷಿಸುತ್ತಿದೆ. ನಮ್ಮ ಮೈತ್ರಿಯು ತಮಿಳುನಾಡಿನಲ್ಲಿ ಮಾತ್ರವಲ್ಲದೆ ಭಾರತದಾದ್ಯಂತ ಭಾರಿ ಗೆಲುವಿನ ಗುರಿಯನ್ನು ಹೊಂದಿದ್ದು, ಪ್ರಧಾನಿ ಮೋದಿಯವರಿಗೆ ಮೂರನೇ ಅವಧಿಗೆ ಅಧಿಕಾರದ ಚುಕ್ಕಾಣಿ ದಾರಿ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.
ಇಂದು, ಮಂಗಳವಾರ ಬೆಳಿಗ್ಗೆ ರಾಮದಾಸ್ ಅವರ ತೈಲಾಪುರಂ ನಿವಾಸದಲ್ಲಿ ಸೀಟು ಹಂಚಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು ಎಂದು ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಉತ್ತರ ಪತ್ರಿಕೆಗಳಲ್ಲಿ ಜೈ ಶ್ರೀ ರಾಮ, ಕ್ರಿಕೆಟ್‌ ಆಟಗಾರರ ಹೆಸರು ಬರೆದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣ ; ಇಬ್ಬರು ಪ್ರಾಧ್ಯಾಪಕರು ಅಮಾನತು

ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರು ಎನ್‌ಡಿಎ ಜೊತೆ ಹೋಗಲು ಪಿಎಂಕೆ ನಿರ್ಧಾರವು 400 ಕ್ಕೂ ಹೆಚ್ಚು ಸಂಸದರ ಆಯ್ಕೆಯಾಗುವ ಗುರಿ ಹೊಂದಿರುವ ಮೈತ್ರಿಕೂಟಕ್ಕೆ ಭಾರಿ ಜಯವನ್ನು ಖಚಿತಪಡಿಸುತ್ತದೆ ಎಂದು ಹೇಳಿದರು.
“ನಿನ್ನೆ ರಾತ್ರಿಯಿಂದ ತಮಿಳುನಾಡು ಬದಲಾಗಿದೆ. ನಾವು 2024 ರಲ್ಲಿ ಭಾರಿ ಗೆಲುವು ಸಾಧಿಸುತ್ತೇವೆ ಮತ್ತು 2026 ರಲ್ಲಿ ರಾಜಕೀಯ ಬದಲಾವಣೆ ಮಾಡುತ್ತೇವೆ. ಡಾ. ಅನ್ಬುಮಣಿ ಅವರನ್ನು ಪ್ರಧಾನಿ ಮೋದಿ ಪಕ್ಕದಲ್ಲಿ ಕೂರಿಸಲು ನಾವು ತಡರಾತ್ರಿ ಕೊಯಮತ್ತೂರಿನಿಂದ ಬಂದಿದ್ದೇವೆ” ಎಂದು ಅಣ್ಣಾಮಲೈ ಹೇಳಿದರು.
ಸೇಲಂನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಪಿಎಂಕೆ ಒಪ್ಪಿಕೊಂಡಿದೆ ಮತ್ತು ಚುನಾವಣೆಯಲ್ಲಿ 10 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಅವರು ಬಹಿರಂಗಪಡಿಸಿದರು. ಕ್ಷೇತ್ರಗಳ ವಿವರಗಳನ್ನು ನಂತರ ಹಂಚಿಕೊಳ್ಳಲಾಗುವುದು ಎಂದು ಅವರು ಹೇಳಿದರು. 2014ರಲ್ಲಿಯೂ ಪಿಎಂಕೆ ಪಕ್ಷವು ಎನ್‌ಡಿಎಯ ಭಾಗವಾಗಿತ್ತು.

5 / 5. 1

ಪ್ರಮುಖ ಸುದ್ದಿ :-   ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಮುಂಬೈ 26/11 ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ವಾದಿಸಿದ್ದ ಉಜ್ವಲ್ ನಿಕಮ್ ಕಣಕ್ಕಿಳಿಸಿದ ಬಿಜೆಪಿ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement