ಶೋಕಾಸ್ ನೋಟಿಸ್‌ಗೆ ಉತ್ತರಿಸದ ಬಾಬಾ ರಾಮದೇವ: ಖುದ್ದು ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್‌ ಸೂಚನೆ

ನವದೆಹಲಿ: ಪತಂಜಲಿ ಉತ್ಪನ್ನಗಳ ಬಗ್ಗೆ ಜನಸಾಮಾನ್ಯರನ್ನು ದಾರಿತಪ್ಪಿಸುವ ಜಾಹೀರಾತು ನೀಡಿದ ಹಿನ್ನೆಲೆಯಲ್ಲಿ ಪತಂಜಲಿ ಆಯುರ್ವೇದ ಸಂಸ್ಥೆ ವಿರುದ್ಧ ಹೂಡಲಾದ ನ್ಯಾಯಾಂಗ ನಿಂದನೆ ಮೊಕದ್ದಮೆಗೆ ಸಂಬಂಧಿಸಿದಂತೆ ಶೋಕಾಸ್ ನೋಟಿಸ್‌ಗೆ ಉತ್ತರ ನೀಡಲು ವಿಫಲವಾದ ಬಾಬಾ ರಾಮದೇವ ಅವರು ಖುದ್ದು ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸೂಚನೆ ನೀಡಿದೆ.
ಪ್ಪು ಮಾಹಿತಿಯೊಂದಿಗೆ ಜನರ ದಾರಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿ ಪತಂಜಲಿ ವಿರುದ್ಧ ಭಾರತೀಯ ವೈದ್ಯಕೀಯ ಸಂಸ್ಥೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಬಾಬಾ ರಾಮದೇವ ಮತ್ತು ಪತಂಜಲಿ ಅಧ್ಯಕ್ಷ ಆಚಾರ್ಯ ಬಾಲಕೃಷ್ಣ ಅವರು ಔಷಧ ಮತ್ತು ಮಾಂತ್ರಿಕ ಪರಿಹಾರಗಳ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆ 1954ರ ಸೆಕ್ಷನ್ 3 ಮತ್ತು 4 ಅನ್ನು ಉಲ್ಲಂಘಿಸಿದ್ದಾರೆ ಎಂದು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ಪೀಠ ಹೇಳಿತ್ತು. ಹಾಗೂ ತಾತ್ಕಾಲಿಕವಾಗಿ ಪತಂಜಲಿ ಜಾಹೀರಾತು ನಿರ್ಬಂಧಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.
ಆದರೆ ಸುಪ್ರೀಂಕೋರ್ಟ್ ನೋಟಿಸ್‌ಗೆ ಉತ್ತರಿಸದ ಹಿನ್ನೆಲೆ ಸುಪ್ರೀಂಕೋರ್ಟ್ ನಮ್ಮ ಆದೇಶಗಳನ್ನು ನಿರ್ಲಕ್ಷ್ಯಿಸಿದ್ದೀರಿ.

ಈ ಹಿನ್ನೆಲೆಯಲ್ಲಿ ಬಾಬಾ ರಾಮದೇವ ಮತ್ತು ಪತಂಜಲಿ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ ಕೋರ್ಟ್ ಮುಂದೆ ಹಾಜರಾಗಬೇಕು ಎಂದು ಸೂಚಿಸಿದೆ.
ಪತಂಜಲಿ ಆಯುರ್ವೇದ ಸಂಸ್ಥೆ ಪ್ರತಿನಿಧಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟ್ಗಿ ಅವರ ತೀವ್ರ ವಿರೋಧದ ನಡುವೆಯೂ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೋಹಟ್ಗಿ ಅವರು ರಾಮದೇವ ಅವರ ವಿಚಾರವನ್ನು ಏಕೆ ಪ್ರಸ್ತಾಪಿಸಲಾಗುತ್ತಿದೆ ಎಂದು ಪ್ರಶ್ನಿಸಿದರು. ಆಗ ನ್ಯಾಯಾಲಯ ನಿಷ್ಠುರವಾಗಿ “ಕಕ್ಷಿದಾರರು ಹಾಜರಾಗಬೇಕಿದೆ. ಮುಂದಿನ ದಿನಾಂಕದಂದು ಆಲಿಸೋಣ. ಇನ್ನು ಸಾಕು” ಎಂದಿತು.

ಪ್ರಮುಖ ಸುದ್ದಿ :-   ಮೊಬೈಲ್ ನಲ್ಲಿ ಹುಡುಗರ ಜೊತೆ ಹರಟೆ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಕೊಡಲಿಯಿಂದ ಹೊಡೆದು ಕೊಂದ 14 ವರ್ಷದ ಬಾಲಕಿ...!

ಕಾನೂನಿನ ಉಲ್ಲಂಘನೆ ನ್ಯಾಯಾಂಗ ನಿಂದನೆಯಲ್ಲ ಮತ್ತು ಮುಕ್ತ ನ್ಯಾಯಾಲಯದಲ್ಲಿ ಏನನ್ನು ಅವಲಂಬಿಸಲಾಗಿದೆ ಎಂಬುದನ್ನು ಆದೇಶದಲ್ಲಿ ದಾಖಲಿಸಬೇಕಾಗಿದೆ ಎಂದು ರೋಹಟ್ಗಿ ವಾದಿಸಿದರು. ಆದರೆ ಇದಕ್ಕೆ ಮಣಿಯದ ನ್ಯಾಯಾಲಯ ಬಾಬಾ ರಾಮದೇವ ಅವರ ಖುದ್ದು ಹಾಜರಿಗೆ ಆದೇಶಿಸಿತು.
ಹಿಂದಿನ ವಿಚಾರಣೆಯಲ್ಲಿ, ಪತಂಜಲಿ ಆಯುರ್ವೇದ ಔಷಧಿಗಳ ಜಾಹೀರಾತನ್ನು ಇತ್ತೀಚೆಗೆ ನಿಷೇಧಿಸಿದ್ದ ನ್ಯಾಯಾಲಯವು ದಾರಿತಪ್ಪಿಸುವ ಹೇಳಿಕೆ ನೀಡಿದ್ದಕ್ಕಾಗಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮದೇವ ಮತ್ತು ಅಧ್ಯಕ್ಷ ಆಚಾರ್ಯ ಬಾಲಕೃಷ್ಣ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಿತ್ತು.

ಯಾವುದೇ ಪ್ರಾಯೋಗಿಕ ಸಾಕ್ಷ್ಯಗಳಿಲ್ಲದಿದ್ದರೂ ತಪ್ಪುದಾರಿಗೆಳೆಯುವ ಹೇಳಿಕೆಗಳನ್ನು ನೀಡುವ ಮೂಲಕ ಪತಂಜಲಿ ದೇಶದ ಜನರ ದಿಕ್ಕುತಪ್ಪಿಸುತ್ತಿದೆ ಎಂದು ಸುಪ್ರೀಂ ಕೋರ್ಟ್ ಟೀಕಿಸಿತ್ತು. 2022 ರಲ್ಲಿ ಪ್ರಸ್ತುತ ಅರ್ಜಿಯನ್ನು ಸಲ್ಲಿಸಲಾಗಿದ್ದರೂ ದಾರಿತಪ್ಪಿಸುವ ಜಾಹೀರಾತುಗಳನ್ನು ನಿಭಾಯಿಸದಿದ್ದಕ್ಕಾಗಿ ಅದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಬೇರೆ ಔಷಧಗಳ ವಿರುದ್ಧ ಪತಂಜಲಿ ಪ್ರತಿಕೂಲ ಹೇಳಿಕೆ ನೀಡುವಂತಿಲ್ಲ ಎಂದು ಅದು ಆದೇಶಿಸಿತ್ತು.
ಕೋವಿಡ್‌ ಲಸಿಕೆ ಮತ್ತು ಆಧುನಿಕ ಔಷಧದ ವಿರುದ್ಧ ಅವಹೇಳನಕಾರಿ ಅಭಿಯಾನ ನಡೆಸಲಾಗುತ್ತಿದೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಅಡ್ವೊಕೇಟ್-ಆನ್-ರೆಕಾರ್ಡ್ ಅಮರಜೀತ್ ಸಿಂಗ್ ಅವರ ಮೂಲಕ ಸಲ್ಲಿಸಿದ ಮನವಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು.
ದಾರಿತಪ್ಪಿಸುವ ವೈದ್ಯಕೀಯ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಮುಂದೆ ಇಂತಹ ಜಾಹೀರಾತುಗಳನ್ನು ಪ್ರಕಟಿಸದಂತೆ ಮತ್ತು ಮಾಧ್ಯಮಗಳಲ್ಲಿ ಅಂತಹ ಹೇಳಿಕೆಗಳನ್ನು ನೀಡದಂತೆ ಅದು ಪತಂಜಲಿ ಆಯುರ್ವೇದಕ್ಕೆ ನಿರ್ದೇಶನ ನೀಡಿತ್ತು.

ಪ್ರಮುಖ ಸುದ್ದಿ :-   ನೂಪುರ್ ಶರ್ಮಾ ಸೇರಿದಂತೆ ಹಲವು ಹಿಂದೂ ನಾಯಕರ ಹತ್ಯೆಗೆ ಸಂಚು: ಮೌಲ್ವಿ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement