ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಕರಂದ್ಲಾಜೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಎಂಕೆ ಪತ್ರ : ತಕ್ಷಣವೇ ಸೂಕ್ತ ಕ್ರಮಕ್ಕೆ ಚುನಾವಣಾ ಆಯೋಗ ಸೂಚನೆ

ನವದೆಹಲಿ/ ಚೆನ್ನೈ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಡಿಎಂಕೆ ನೀಡಿರುವ ದೂರು ಆಧರಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ಕೇಂದ್ರ ಚುನಾವಣಾ ಆಯೋಗವು ಬುಧವಾರ ನಿರ್ದೇಶನ ನೀಡಿದೆ.
“ಮಾರ್ಚ್ 1 ರಂದು ನಡೆದ ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ತಮಿಳುನಾಡಿನ ಜನರ ಕೈವಾಡವಿದೆ” ಎಂದು ಮಂಗಳವಾರ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದ ಶೋಭಾ ಕರಂದ್ಲಾಜೆ ಅವರು ಮಾದಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಡಿಎಂಕೆ ದೂರಿನಲ್ಲಿ ಆರೋಪಿಸಲಾಗಿದೆ.
ಬೆಂಗಳೂರಿನಲ್ಲಿ ಮಂಗಳವಾರ ನಡೆದಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶೋಭಾ ಕರಂದ್ಲಾಜೆ, ‘ಕರ್ನಾಟಕದಲ್ಲಿ ಕಾನೂನು-ಸುವ್ಯವಸ್ಥೆ ಕುಸಿದಿದೆ.”ತಮಿಳುನಾಡಿನಿಂದ ಬರುವ ಜನರು ಇಲ್ಲಿ (ಬೆಂಗಳೂರಿನಲ್ಲಿ ಬಾಂಬ್ ಇಡುತ್ತಾರೆ), ದೆಹಲಿಯ ಜನರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳನ್ನು ಕೂಗುತ್ತಾರೆ ಮತ್ತು ಕೇರಳದಿಂದ ಬರುವ ಜನರು ಆಸಿಡ್ ದಾಳಿ ನಡೆಸುತ್ತಾರೆ ಎಂದು ಹೇಳಿರುವುದು ವಿವಾದ ಸ್ವರೂಪ ಪಡೆದುಕೊಂಡಿತು.

ಈ ಹೇಳಿಕೆ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹಾಗೂ ಡಿಎಂಕೆ ಇತರ ನಾಯಕರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದರು. ಶೋಭಾ ಕರಂದ್ಲಾಜೆ ಅವರ ಹೇಳಿಕೆ ಅಜಾಗರೂಕತೆಯಿಂದ ಕೂಡಿದೆ. ಪ್ರಧಾನಿ ಮೋದಿ ಅವರಿಂದ ಹಿಡಿದು ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತ ಇಂತಹ ವಿಭಜಕ ರಾಜಕಾರಣವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಸ್ಟಾಲಿನ್‌ ಆಗ್ರಹಿಸಿದ್ದರು.
ಸ್ಟಾಲಿನ್‌ ಅವರ ಹೇಳಿಕೆ ಬೆನ್ನಲ್ಲೇ, ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದ ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್‌.ಎಸ್‌.ಭಾರತಿ ಅವರು,
ಈ ಹೇಳಿಕೆಯು ಕರ್ನಾಟಕದ ಜನರು ಮತ್ತು ತಮಿಳುನಾಡಿನ ಜನರ ನಡುವೆ ದ್ವೇಷ ಭಾವನೆಗಳನ್ನು ಉತ್ತೇಜಿಸುತ್ತದೆ. ಎರಡು ಸಮುದಾಯಗಳ ನಡುವೆ, ಅಂದರೆ ತಮಿಳಿಗರು ಮತ್ತು ಕನ್ನಡಿಗರ ನಡುವೆ ಹಗೆತನ ಮತ್ತು ದ್ವೇಷವನ್ನು

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ

ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಡಿಎಂಕೆ ದೂರಿನಲ್ಲಿ ಹೇಳಿದೆ.
‘ಕರ್ನಾಟಕ ಮತ್ತು ತಮಿಳುನಾಡು ಜನರ ಮಧ್ಯೆ ದ್ವೇಷ ಮತ್ತು ವೈರತ್ವ ಬಿತ್ತುವುದು ಹಾಗೂ ಆ ಮೂಲಕ ಚುನಾವಣೆಯಲ್ಲಿ ಲಾಭ ಗಳಿಸುವ ಉದ್ದೇಶದಿಂದ ಸಚಿವೆ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಚಿವೆಯ ಹೇಳಿಕೆ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಇದು ಸಮಾಜವನ್ನು ವಿಭಜಿಸುವ ಹೇಳಿಕೆಯಾಗಿದ್ದು, ಎರಡು ಸಮುದಾಯಗಳ ನಡುವಿನ ಸಂಬಂಧಕ್ಕೆ ಹಾನಿ ಉಂಟು ಮಾಡಿದೆ. ಸಾಮಾಜಿಕ ಜಾಲತಾಣಗಳು ಎರಡು ಸಮುದಾಯಗಳ ನಡುವಿನ ದ್ವೇಷ-ವೈರತ್ವ ಮತ್ತಷ್ಟೂ ಹೆಚ್ಚಾಗುವಂತೆ ಮಾಡಿವೆ’ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವಿವಿಧ ಗುಂಪುಗಳ ನಡುವೆ ವೈರತ್ವ ಸೃಷ್ಟಿಸಿದ’ ಆರೋಪದಡಿ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮದುರೈ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.

ಆದರೆ ಕರಂದ್ಲಾಜೆ ಅವರು ಮಂಗಳವಾರದ ನಂತರ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದರು. “ನನ್ನ ತಮಿಳು ಸಹೋದರರು ಮತ್ತು ಸಹೋದರಿಯರೆ ನನ್ನ ಟೀಕೆಗಳು ಕೆಲವರಿಗೆ ನೋವು ತಂದಿರಬಹುದು, ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ನನ್ನ ಟೀಕೆಗಳು ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿ ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದವರ ಕಡೆಗೆ ಮಾತ್ರ ನಿರ್ದೇಶಿಸಲ್ಪಟ್ಟಿವೆ. ತಮಿಳುನಾಡಿನಿಂದ ಯಾರಿಗಾದರೂ ನೋವಾಗಿದ್ದರೆ ನನ್ನ ಹೃದಯದ ಆಳದಿಂದ ನಾನು ನಿಮ್ಮ ಕ್ಷಮೆಯನ್ನು ಕೇಳುತ್ತೇನೆ. ಇದಲ್ಲದೆ, ನಾನು ನನ್ನ ಹಿಂದಿನ ಹೇಳಿಕೆಯನ್ನು ಹಿಂತೆಗೆದುಕೊಳ್ಳುತ್ತೇನೆ ಎಂದು ಅವರು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement