ಬೆಂಗಳೂರು : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಜೆಪಿ ನಗರದ ಮೂರನೇ ಹಂತದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಜೆ‌.ಪಿ.ನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಅವರು ಉಡುಪಿ ಮೂಲದ ಅಂಬಲಪಾಡಿ ನಿವಾಸಿಗಳೆನ್ನಲಾಗಿದ್ದು ಜೆಪಿ ನಗರದಲ್ಲಿ ವಾಸವಾಗಿದ್ದರು
ಖಾಸಗಿ ಬ್ಯಾಂಕ್‌ ನಲ್ಲಿ ಸಾಲ ಪಡೆದಿದ್ದರು, ಇಬ್ಬರು ಮಕ್ಕಳೊಂದಿಗೆ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ಸಾಲದ ಒತ್ತಡ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಜೆ‌ಪಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

ನಿಮ್ಮ ಕಾಮೆಂಟ್ ಬರೆಯಿರಿ

advertisement