
ನವದೆಹಲಿ : ಏಪ್ರಿಲ್ 19 ರಂದು ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರಿಕೆ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಗಳಲ್ಲಿ 102 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.
ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆ ಪ್ರಕಾರ ಮಾರ್ಚ್ ಮೊದಲ ಹಂತದ ಮತದಾನಕ್ಕೆ ಮಾರ್ಚ್ 27 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಆದಾಗ್ಯೂ, ಹಬ್ಬದ ಕಾರಣಕ್ಕೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ಬಿಹಾರದ ಲೋಕಸಭಾ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಮಾರ್ಚ್ 28 ಕೊನೆಯ ದಿನಾಂಕವಾಗಿದೆ. ಬಿಹಾರದ 40 ಸ್ಥಾನಗಳ ಪೈಕಿ ನಾಲ್ಕರಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 28 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಬಿಹಾರಕ್ಕೆ ಮಾರ್ಚ್ 30 ರಂದು ನಡೆಯಲಿದೆ. ಲೋಕಸಭೆ ಚುನಾವಣೆ ಉಮೇದುವಾರಿಕೆ ಹಿಂಪಡೆಯಲು ಮಾರ್ಚ್ 30 ಕೊನೆಯ ದಿನಾಂಕವಾಗಿದ್ದು, ಬಿಹಾರಕ್ಕೆ ಇದು ಏಪ್ರಿಲ್ 2 ಆಗಿದೆ.
18 ನೇ ಲೋಕಸಭೆಯ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯುತ್ತದೆ. ನಂತರದ ಹಂತಗಳ ಮತದಾನ ಏಪ್ರಿಲ್ 26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1 ರಂದು ನಡೆಯಲಿದೆ. ಮತಗಳ ಎಣಿಕೆ ಜೂನ್ 4 ರಂದು ನಡೆಯಲಿದೆ.


ನಿಮ್ಮ ಕಾಮೆಂಟ್ ಬರೆಯಿರಿ