ಬಿಜೆಪಿ ಮೂರನೇ ಪಟ್ಟಿ ಪ್ರಕಟ; ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್, ಅಣ್ಣಾಮಲೈ ಸೇರಿದಂತೆ ಪ್ರಮುಖರಿಗೆ ಟಿಕೆಟ್

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಲೋಕಸಭೆ ಅಭ್ಯರ್ಥಿಗಳ ತನ್ನ ಮೂರನೇ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ತೆಲಂಗಾಣ ಮಾಜಿ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರಿಗೆ ಟಿಕೆಟ್‌ ನೀಡಲಾಗಿದೆ. ಆದರೆ ಮೂರನೇ ಪಟ್ಟಿಯಲ್ಲಿ ಕರ್ನಾಟಕದ ಯಾವ ಅಭ್ಯರ್ಥಿಯನ್ನೂ ಪ್ರಕಟಿಸಲಾಗಿಲ್ಲ.
ತಮಿಳಿಸೈ ಸೌಂದರರಾಜನ್ ಚೆನ್ನೈ ದಕ್ಷಿಣದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕೊಯಮತ್ತೂರಿನಿಂದ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಕಣಕ್ಕೆ ಇಳಿಯಲಿದ್ದಾರೆ. ನೀಲಗಿರಿಯಿಂದ ಕೇಂದ್ರ ಸಚಿವ ಎಲ್ ಮುರುಗನ್, ಕನ್ಯಾಕುಮಾರಿಯಿಂದ ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರಿಗೆ ಟಿಕೆಟ್‌ ನೀಡಲಾಗಿದೆ.
ಚೆನ್ನೈ ಸೆಂಟ್ರಲ್ ನಿಂದ ವಿನೋಜ್ ಪಿ ಸೆಲ್ವಂ, ವೆಲ್ಲೂರಿನಿಂದ ಎ.ಸಿ. ಷಣ್ಮುಗಂ, ಕೃಷ್ಣಗಿರಿಯಿಂದ ಸಿ.ನರಸಿಂಹನ್ ಮತ್ತು ತಿರುನಲ್ವೇಲಿಯಿಂದ ನೈನಾರ್ ನಾಗೇಂದ್ರನ್ ಅವರು ಸ್ಪರ್ಧಿಸಲಿದ್ದಾರೆ ಎಂದು ಪಕ್ಷ ತಿಳಿಸಿದೆ.

ರಾಜ್ಯದ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಿಂದ ಬಿಜೆಪಿ ಒಂದೇ ಒಂದು ಸ್ಥಾನವನ್ನು ಗೆದ್ದಿಲ್ಲ.
ಬಿಜೆಪಿ ಎರಡನೇ ಪಟ್ಟಿಯಲ್ಲಿ 72 ಅಭ್ಯರ್ಥಿಗನ್ನು ಹೆಸರಿಸಿತ್ತು. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪಿಯೂಷ್ ಗೋಯಲ್ ಮತ್ತು ಅನುರಾಗ್ ಸಿಂಗ್ ಠಾಕೂರ್ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಮನೋಹರ್ ಲಾಲ್ ಖಟ್ಟರ್, ತ್ರಿವೇಂದ್ರ ಸಿಂಗ್ ರಾವತ್ ಮತ್ತು ಬಸವರಾಜ್ ಬೊಮ್ಮಾಯಿ ಅವರಿಗೆ ಟಿಕೆಟ್‌ ನೀಡಲಾಗಿದೆ.
ಬಿಜೆಪಿ ಇಲ್ಲಿವರೆಗೆ ಒಟ್ಟು 276 ಕ್ಷೇತ್ರಗಳಿಗೆ ಟಿಕೆಟ್ ನೀಡಿದಂತಾಗಿದೆ. ಇನ್ನೂ 267 ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿಯಿದೆ. ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಘೋಷಿಸಿದ್ದು, 5 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ.
ಬಿಜೆಪಿ ಮುಖ್ಯ ವಕ್ತಾರ ಮತ್ತು ರಾಜ್ಯಸಭಾ ಸದಸ್ಯ ಅನಿಲ್ ಬಲೂನಿ ಅವರನ್ನು ಉತ್ತರಾಖಂಡದ ಗರ್ವಾಲ್‌ನಿಂದ ಕಣಕ್ಕಿಳಿಸಲಾಗಿದೆ.
ಉತ್ತರ ಪ್ರದೇಶದಿಂದ 51, ಪಶ್ಚಿಮ ಬಂಗಾಳದಿಂದ 20, ಮಧ್ಯಪ್ರದೇಶದಿಂದ 24, ಗುಜರಾತ್ ಮತ್ತು ರಾಜಸ್ಥಾನದಿಂದ ತಲಾ 15, ಕೇರಳದಿಂದ 12, ತೆಲಂಗಾಣದಿಂದ 9, ಅಸ್ಸಾಂನಿಂದ, ಜಾರ್ಖಂಡ್ ಮತ್ತು ಛತ್ತೀಸ್‌ಗಢದಿಂದ ತಲಾ 11 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ.

ಪ್ರಮುಖ ಸುದ್ದಿ :-   'ಪುರಿ ಜಗನ್ನಾಥ ಪ್ರಧಾನಿ ಮೋದಿ ಭಕ್ತ' ಹೇಳಿಕೆ: ಬಾಯಿತಪ್ಪಿನ ಹೇಳಿಕೆಗೆ 3 ದಿನ ಉಪವಾಸ ಕೈಗೊಂಡ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement