ಐಪಿಎಲ್ (IPL) 2024 : ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನ ಸ್ಥಾನ ತ್ಯಜಿಸಿದ ಧೋನಿ; ನೂತನ ಕ್ಯಾಪ್ಟನ್ ನೇಮಕ

ಚೆನ್ನೈ: 2024 ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೆ ಮುಂಚಿತವಾಗಿ ಮಹೇಂದ್ರ ಸಿಂಗ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ (CSK) ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಹಾಗೂ ರುತುರಾಜ್ ಗಾಯಕ್ವಾಡ್ ಅವರನ್ನು ನೂತನ ನಾಯಕನಾಗಿ ನೇಮಿಸಲಾಗಿದೆ.
“ಮಹೇಂದ್ರ ಸಿಂಗ್ ಧೋನಿ ಐಪಿಎಲ್ (IPL) 2024 ರ ಆರಂಭದ ಮೊದಲು ರುತುರಾಜ್ ಗಾಯಕ್ವಾಡ್ ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ಹಸ್ತಾಂತರಿಸಿದ್ದಾರೆ.
ರುತುರಾಜ್ 2019 ರಿಂದ ಚೆನ್ನೈ ಸೂಪರ್ ಕಿಂಗ್ಸ್‌ ನ ತಂಡದಲ್ಲಿದ್ದಾರೆ ಮತ್ತು ಈ ಅವಧಿಯಲ್ಲಿ IPL ನಲ್ಲಿ 52 ಪಂದ್ಯಗಳನ್ನು ಆಡಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ (CSK) ಹೇಳಿಕೆಯಲ್ಲಿ ತಿಳಿಸಿದೆ.

ಮಾರ್ಚ್ 22ರಂದು ಚೆನ್ನೈನ ಎಂ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸವಾಲನ್ನು ಎದುರಿಸಲಿದೆ. ಇದಕ್ಕೂ ಒಂದು ದಿನ ಮುಂಚಿತವಾಗಿ ನಾಯಕ ಸ್ಥಾನ ಬಿಟ್ಟುಕೊಡಲು ಧೋನಿ ನಿರ್ಧರಿಸಿದ್ದಾರೆ. ಈ ಕುರಿತು ಸಿಎಸ್‌ಕೆ ತನ್ನ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಆರೋಪ: ಜನಸಾಮಾನ್ಯರಿಗೆ ರಾಜಭವನದ ಸಿಸಿಟಿವಿ ದೃಶ್ಯಾವಳಿ ತೋರಿಸಿದ ಪಶ್ಚಿಮ ಬಂಗಾಳದ ರಾಜ್ಯಪಾಲ

ಗಾಯಕ್ವಾಡ್ ಅವರು ಪ್ರಿ-ಕ್ಯಾಪ್ಟನ್ಸ್ ಫೋಟೋಶೂಟ್‌ನಲ್ಲಿ ಭಾಗವಹಿಸಿದರು ಮತ್ತು ಇತರ ತಂಡಗಳ ನಾಯಕರನ್ನು ಭೇಟಿ ಮಾಡಿದರು ಮತ್ತು ಪುಣೆ ಮೂಲದ ಯುವಕ ಪಂದ್ಯಾವಳಿಯಲ್ಲಿ ಮೊದಲ ಬಾರಿಗೆ ನಾಯಕರಾಗಿದ್ದಾರೆ. ಋತುರಾಜ್, ಒಟ್ಟು 52 ಪಂದ್ಯಗಳನ್ನು ಆಡಿದ್ದಾರೆ. ಒಂದು ಶತಕವನ್ನು ಗಳಿಸಿದ್ದಾರೆ. ಕಳೆದ ವರ್ಷ 16 ಪಂದ್ಯಗಳಲ್ಲಿ 147.50 ಸ್ಟ್ರೈಕ್‌ರೇಟ್‌ನಲ್ಲಿ 590 ರನ್ ಗಳಿಸಿದ್ದರು.
ಧೋನಿ ಜುಲೈನಲ್ಲಿ 43 ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಧೋನಿ ನೇತೃತ್ವದ ಸಿಎಸ್‌ಕೆ ಕಳೆದ ವರ್ಷ ಐದನೇ ಐಪಿಎಲ್ ಪ್ರಶಸ್ತಿಯನ್ನು ಗೆದ್ದು ಮುಂಬೈ ಇಂಡಿಯನ್ಸ್‌ನೊಂದಿಗೆ ಹೆಚ್ಚು ಪ್ರಶಸ್ತಿಗಳನ್ನು ಗೆದ್ದ ಪಟ್ಟಿಯಲ್ಲಿ ಸಮಬಲ ಸಾಧಿಸಿತು.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement