ಸರ್ವರಿಗೂ ಕ್ರೋಧಿ ಸಂವತ್ಸರದ ಯುಗಾದಿಯ ಹಾರ್ದಿಕ ಶುಭಾಶಯಗಳು

ಬಿಗ್ ಬಾಸ್ ಒಟಿಟಿ ಖ್ಯಾತಿಯ ಸೋನು ಶ್ರೀನಿವಾಸ ಗೌಡ ಅರೆಸ್ಟ್

ಬೆಂಗಳೂರು: ಬಿಗ್ ಬಾಸ್‌’ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಸೋನು ಶ್ರೀನಿವಾಸ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪ ಮೇಲೆ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಅವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಈ ವಿಚಾರವಾಗಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ಕಲ್ಯಾಣ ಇಲಾಖೆಯಿಂದ ಸೋನು ಗೌಡ ವಿರುದ್ಧ ದೂರು ದಾಖಲಾಗಿದೆ. ಹೀಗಾಗಿಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ ಗೌಡ ಬಂಧನ ಮಾಡಿದ್ದಾರೆ.

ಮಗುವನ್ನು ದತ್ತು ಪಡೆದಿರುವುದಾಗಿ ಸೋನು ಗೌಡ ಇತ್ತೀಚೆಗೆ ಹೇಳಿಕೊಂಡಿದ್ದರು. 6ರಿಂದ 8 ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಪಡೆದ ಆರೋಪದ ಮೇಲೆ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ದತ್ತು ಪಡೆದಿರುವ ಹೆಣ್ಣು ಮಗುವನ್ನು ಪ್ರಚಾರಕ್ಕೆ ಬಳಸಿಕೊಂಡಿರುವ ಆರೋಪ ಸೋನು ಮೇಲಿದೆ. ಅಲ್ಲದೆ, ದತ್ತು ಪಡೆಯಲು ಅನುಸರಿಬೇಕಾದ ಕಾನೂನಾತ್ಮಕ ಪ್ರಕ್ರಿಯೆಗಳನ್ನು ಸಹ ಸರಿಯಾಗಿ ಮಾಡಿಲ್ಲ ಎಂಬ ಆರೋಪ ಸಹ ಇದೆ. ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿಕೊಂಡು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಜೇನು ಹುಳುಗಳ ದಾಳಿಯಿಂದ 30ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯ : ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿರ್ಬಂಧ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement