ಯಲ್ಲಾಪುರ: ತೋಟಕ್ಕೆ ಬಂದ ಕಾಡಾನೆ ಸಾವು

ಯಲ್ಲಾಪುರ: ತೋಟಕ್ಕೆ ಬಂದ ಕಾಡಾನೆಯೊಂದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ದೇಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕಟ್ಟಿಗೆಯ ಇಡಕೆಮನೆ ಬಳಿ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಇಡಕೆಮನೆಯ ಪರಮೇಶ್ವರ ರಾಮಾ ಕುಣಬಿ ಅವರ ತೋಟಕ್ಕೆ ಕಾಡಾನೆ ಬಂದಿತ್ತು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಆನೆ ಮೃತಪಟ್ಟಿದೆ ಎನ್ನಲಾಗಿದೆ. ಆಹಾರ ಅರಸಿ ತೋಟಕ್ಕೆ ಬಂದ ಕಾಡಾನೆ ತನ್ನ ಪ್ರಾಣ ಕಳೆದುಕೊಂಡಿದೆ. ಈ‌ ಕುರಿತು ವಿಷಯ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಮರಣೋತ್ತರ ಪರೀಕ್ಷೆಗೆ ಕ್ರಮ ಕೈಗೊಂಡಿದ್ದಾರೆ. ನಂತರ ಅರಣ್ಯ ಇಲಾಖೆಯವರು, ಗ್ರಾಮಸ್ಥರ ಉಪಸ್ಥಿತಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

5 / 5. 4

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ 9ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜುಲೈ 7ರ ವರೆಗೆ ಭಾರಿ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement