ಲೋಕಸಭೆ ಚುನಾವಣೆ ಸನಿಹದಲ್ಲಿ ಜೆಡಿಎಸ್‌ ಗೆ ಶಾಕ್‌ : ವಿಧಾನ ಪರಿಷತ್ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

ಹುಬ್ಬಳ್ಳಿ: ವಿಧಾನ ಪರಿಷತ್ತಿನ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಗುರುವಾರ ಸಭಾಪತಿ ಹೊರಟ್ಟಿ ನಿವಾಸದಲ್ಲಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕರಿಸಿದ್ದಾರೆ.
ಮರಿತಿಬ್ಬೇಗೌಡರು ಸ್ವ ಇಚ್ಛೆಯಿಂದ ರಾಜೀನಾಮೆ ಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ರಾಜೀನಾಮೆ ಅಂಗೀಕಾರ ಮಾಡಲಾಗಿದೆ” ಎಂದು ಸಭಾಪತಿ ಹೊರಟ್ಟಿ ತಿಳಿಸಿದ್ದಾರೆ.
ರಾಜೀನಾಮೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮರಿತಿಬ್ಬೇಗೌಡ ಅವರು, “ಜನತಾದಳದ ವರಿಷ್ಠ ಹೆಚ್​ ಡಿ ದೇವೆಗೌಡ, ರಾಜ್ಯಾಧ್ಯಕ್ಷ ಹೆಚ್ ​ಡಿ ಕುಮಾರಸ್ವಾಮಿ ಅವರು ನಿಷ್ಠಾವಂತರನ್ನು ಕಡೆಗಣನೆ ಮಾಡಿದ್ದಾರೆ. ಇದರಿಂದ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಸಭಾಪತಿಗಳು ರಾಜೀನಾಮೆ ಅಂಗೀಕಾರ ಮಾಡಿದ್ದಾರೆ ಎಂದು ತಿಳಿಸಿದರು.

“ಜೆಡಿಎಸ್‌ ನಿಂದ ಎರಡು ಬಾರಿ ಟಿಕೆಟ್ ಪಡೆದಿದ್ದೆ. ಎರಡು ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಗೆದ್ದಿದ್ದೇನೆ. ಈ ಅವಧಿಯಲ್ಲಿ ವಿಧಾನ ಪರಿಷತ್ ಉಪ ಸಭಾಪತಿಯೂ ಆಗಿದ್ದೆ. ನನ್ನ ರಾಜಕೀಯ ಪ್ರಾರಂಭವಾಗಿದ್ದು ಜನತಾ ದಳದಿಂದ. ಕೆಲವು ಸಲ ವಿಧಾನ ಪರಿಷತ್ ಹಾಗೂ ವಿಧಾನಸಭೆ ಟಿಕೆಟ್ ನನಗೆ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಾನು ಶಿಕ್ಷಕರ ಜೊತೆ ಸಮಾಲೋಚನೆ ಮಾಡಿ ನಿರ್ಧಾರ ಮಾಡಿದ್ದೇನೆ. ಎಲ್ಲರೂ ಪಕ್ಷ ಬಿಡಿ ಎಂದು ಅಭಿಪ್ರಾಯ ಸೂಚಿಸಿದ್ದಾರೆ. ಹೀಗಾಗಿ ನಾನು ರಾಜೀನಾಮೆ ನೀಡಿದ್ದೇನೆ. ಶೀಘ್ರವೇ ನನ್ನ ಮುಂದಿನ ನಿರ್ಧಾರ ಏನು ಎಂಬುದನ್ನು ತಿಳಿಸುತ್ತೇನೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ; 16 ಕಡೆಗಳಲ್ಲಿ ಎನ್ಐಎ ದಾಳಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement