ಹಿಮಾಚಲ ಪ್ರದೇಶ : ಕಾಂಗ್ರೆಸ್ಸಿನ 6 ಅನರ್ಹ ಶಾಸಕರು, 3 ಪಕ್ಷೇತರ ಶಾಸಕರು ಬಿಜೆಪಿಗೆ ಸೇರ್ಪಡೆ

ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವಿಪ್ ಧಿಕ್ಕರಿಸಿ ಅಡ್ಡ ಮತದಾನ ಮಾಡಿದ ಹಿಮಾಚಲ ಪ್ರದೇಶ ವಿಧಾನಸಭೆಯ ಆರು ಮಾಜಿ ಕಾಂಗ್ರೆಸ್ ಶಾಸಕರು ಇಂದು, ಶನಿವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಅಲ್ಲದೆ, ಮೂವರು ಸ್ವತಂತ್ರ ಶಾಸಕರು ಸಹ ಬಿಜೆಪಿ ಸೇರಿದ್ದಾರೆ.
ಕೇಂದ್ರ ಸಚಿವ ಅನುರಾಗ ಠಾಕೂರ್, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಜೈರಾಮ ಠಾಕೂರ್ ಮತ್ತು ಹಿಮಾಚಲ ಪ್ರದೇಶದ ಬಿಜೆಪಿ ಅಧ್ಯಕ್ಷ ರಾಜೀವ ಬಿಂದಾಲ್ ಸೇರಿದಂತೆ ಬಿಜೆಪಿ ಪ್ರಮುಖರು ಪಾಲ್ಗೊಂಡ ಸಮಾರಂಭದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾದರು.
ಅನುರಾಗ ಠಾಕೂರ್ ಅವರು ಮಾಜಿ ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಸ್ವಾಗತಿಸಿ ಮಾತನಾಡಿ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವು ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಬಿಜೆಪಿಗೆ ನಿಷ್ಠೆ ಬದಲಿಸಿದ ಆರು ಅನರ್ಹ ಕಾಂಗ್ರೆಸ್ ಶಾಸಕರೆಂದರೆ ಸುಧೀರ ಶರ್ಮಾ, ರವಿ ಠಾಕೂರ್, ರಾಜಿಂದರ್ ರಾಣಾ, ಇಂದರ್ ದತ್ತ ಲಖನಪಾಲ್, ಚೆತನ್ಯ ಶರ್ಮಾ ಮತ್ತು ದೇವಿಂದರಕುಮಾರ ಭುಟ್ಟೊ. ಕಾಂಗ್ರೆಸ್ ಟಿಕೆಟ್‌ನಲ್ಲಿ ಆಯ್ಕೆಯಾದ ಅವರನ್ನು ಫೆಬ್ರವರಿ 29 ರಂದು ಪಕ್ಷದ ಸೂಚನೆಗಳನ್ನು ಅನುಸರಿಸಲು ನಿರಾಕರಿಸಿದ್ದಕ್ಕಾಗಿ ಅನರ್ಹಗೊಳಿಸಲಾಯಿತು. ಆಶಿಶ್ ಶರ್ಮಾ, ಹೋಶಿಯಾರ್ ಸಿಂಗ್ ಮತ್ತು ಕೆಎಲ್ ಠಾಕೂರ್ ಬಿಜೆಪಿಗೆ ಸೇರ್ಪಡೆಯಾದ ಮೂವರು ಸ್ವತಂತ್ರ ಶಾಸಕರಾಗಿದ್ದಾರೆ.

ಪ್ರಮುಖ ಸುದ್ದಿ :-   'ಐಸ್‌ಕ್ರೀಂ ಮ್ಯಾನ್‌' ಖ್ಯಾತಿಯ ನ್ಯಾಚುರಲ್ಸ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ ಕಾಮತ್ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement