ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಕರ್ನಾಟಕದ ರಾಜಕೀಯದಲ್ಲಿ ಭಾರೀ ಬೆಳವಣಿಗೆಯಾಗಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (Kalyana Rajya Pragati Party) ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಅವರು ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ, ತಮ್ಮ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡುವುದಾಗಿ ಹೇಳಿದ್ದಾರೆ.
ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಗಳ ಬೆಂಬಲಿಗರ ಜೊತೆ ಜನಾರ್ದನ ರೆಡ್ಡಿ ಸೋಮವಾರ (ಮಾರ್ಚ್ 25) ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಜನಾರ್ದನ ರೆಡ್ಡಿ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ ಎರಡು ದಿನದೊಳಗೆ ಈ ಮಹತ್ವದ ಬೆಳವಣಿಗೆ ನಡೆದಿದೆ. ಚಾಲುಕ್ಯ ವೃತ್ತದ ಬಳಿ ಇರುವ ತಮ್ಮ ನಿವಾಸ ಪಾರಿಜಾತದಲ್ಲಿ ಕೆಆರ್‌ಪಿಪಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ನಂತರ ಜನಾರ್ದನ ರೆಡ್ಡಿ ಬಿಜೆಪಿ ಸೇರುವ ಘೋಷಣೆ ಮಾಡಿದ್ದಾರೆ.
ತಮ್ಮ ನಿವಾಸದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳು, ಬೆಂಬಲಗರ ಜೊತೆ ಬಿಜೆಪಿ ಸೇರುವ ಬಗ್ಗೆ ಮುಕ್ತವಾಗಿ ಚರ್ಚಿಸಿದರು. ಅಲ್ಲದೆ ಬಿಜೆಪಿ ಜತೆ ಕೆಆರ್‌ಪಿಪಿ ಪಕ್ಷದ ವಿಲೀನದ ಬಗ್ಗೆಯೂ ಸಭೆಯಲ್ಲಿ ಸರ್ವ ಸಮ್ಮತದ ನಿರ್ಧಾರ ಮಾಡಲಾಗಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, ಬಿಜೆಪಿ ನಾಯಕರ ಆಹ್ವಾನದ ಮೇರೆಗೆ ನಾಳೆ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ನಾಳೆ (ಮಾರ್ಚ್ 25) ಬೆಳಗ್ಗೆ 10ಕ್ಕೆ ಬಿಜೆಪಿ ಸೇರ್ಪಡೆಯಾಗುತ್ತಿದ್ದು, ಇದಕ್ಕೆ ಎಲ್ಲಾ ಬೆಂಬಲಿಗರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಪಕ್ಷದಲ್ಲಿ ಅತಿ ಚಿಕ್ಕ ವಯಸ್ಸಿನಿಂದಲೂ ಕೆಲಸ ಮಾಡಿದ್ದೇನೆ. ಮಧ್ಯದಲ್ಲಿ ಏನೆಲ್ಲ ಆಯಿತು ಎಂಬುದು ನಿಮಗೂ ಗೊತ್ತು. ನಾನು ಕೂಡ ತಾಯಿ ಸಮಾನವಾಗಿರುವ ಬಿಜೆಪಿ ಸೇರ್ಪಡೆಯಾಗುವುದಕ್ಕೂ ಮುನ್ನ ಬೆಂಬಲಿಗರ ಜತೆ ಸಭೆ ಮಾಡಿದ್ದೇನೆ.
ಕಳೆದ ಹತ್ತು ವರ್ಷದಲ್ಲಿ ದೇಶಕ್ಕೆ ಒಳ್ಳೆಯ ಹೆಸರು ಬಂದಿದೆ. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. ಮತ್ತೆ ಪಕ್ಷಕ್ಕಾಗಿ ಬಿಜೆಪಿಗಾಗಿ ಮಾಡಬೇಕು ಎಂದರು. ಶ್ರೀರಾಮುಲು ಚಿಕ್ಕ ಮಗುವಿಗಾಗಿದ್ದಾನಿಂದಲೂ ಜೊತೆಗಿದ್ದವರು. ಅವರ ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ತಿಳಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ