ನೀತಿ ಸಂಹಿತೆ ಉಲ್ಲಂಘನೆ : ಬಿ.ವೈ.ರಾಘವೇಂದ್ರ ವಿರುದ್ಧ ದೂರು ದಾಖಲು

ಚಿತ್ರದುರ್ಗ: ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಧಾರ್ಮಿಕ ಸ್ಥಳವಾದ ಭೋವಿ ಗುರುಪೀಠವನ್ನು ರಾಜಕೀಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಂಡಿದ್ದಾರೆ ಹಾಗೂ ಅನುಮತಿ ಪಡೆಯದೆ ಸಭೆ ನಡೆಸಿ ಬಿಜೆಪಿ ಪರ ಪ್ರಚಾರ ಮಾಡುವ ಮೂಲಕ ಸಂಸದ ಬಿ.ವೈ.ರಾಘವೇಂದ್ರ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಎಫ್‌ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.
ರಾಘವೇಂದ್ರ ಅವರು ಶನಿವಾರ ಮಠಕ್ಕೆ ಭೇಟಿ ನೀಡಿ ಮಠಾಧೀಶರೊಂದಿಗೆ ಸಭೆ ಮಾಡಿದ್ದರು. ಸಭೆಯ ವೀಡಿಯೊ ಆಧರಿಸಿ ಚುನಾವಣಾ ಸಿಬ್ಬಂದಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   'ಸಿಎಂ ಆಕಾಂಕ್ಷಿ’ ನಾಯಕರಿಗೆ ಎಚ್ಚರಿಕೆ ನೀಡಿ : ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್‌ ಮುಖಂಡರು

ನಿಮ್ಮ ಕಾಮೆಂಟ್ ಬರೆಯಿರಿ

advertisement