ಲೋಕಸಭೆ ಚುನಾವಣೆ: ಬಿಜೆಪಿಯ 5ನೇ ಪಟ್ಟಿ ಬಿಡುಗಡೆ, ಕರ್ನಾಟಕದ 4 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ, ಅನಂತಕುಮಾರ ಹೆಗಡೆಗೆ ತಪ್ಪಿದ ಟಿಕೆಟ್‌

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 5ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್‌ ನೀಡಲಾಗಿದೆ. ಜಗದೀಶ ಶೆಟ್ಟರ​ಗೆ ಬೆಳಗಾವಿ ಟಿಕೆಟ್ ಘೋಷಣೆ ಮಾಡಲಾಗಿದೆ. ಚಿತ್ರದುರ್ಗ ಕ್ಷೇತ್ರದ ಟಿಕೆಟ್‌ ಘೋಷನೆ ಮಾಡಿಲ್ಲ. , ರಾಜ್ಯ ನಾಯಕರೊಂದಿಗೆ ಮತ್ತೊಮ್ಮೆ ಚರ್ಚಿಸಿ ಟಿಕೆಟ್ ಘೋಷಿಸಲು ಹೈಕಮಾಂಡ್ ನಿರ್ಧರಿಸಿದೆ.
ರಾಯಚೂರು ಲೋಕಸಭಾ ಕ್ಷೇತ್ರ-ರಾಜಾ ಅಮರೇಶ್ವರ ನಾಯಕ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ-ಡಾ.ಕೆ.ಸುಧಾಕರ​​​
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ-ವಿಶ್ವೇಶ್ವರ ಹೆಗಡೆ ಕಾಗೇರಿ
ಬೆಳಗಾವಿ ಲೋಕಸಭಾ ಕ್ಷೇತ್ರ-ಜಗದೀಶ ಶೆಟ್ಟರ​
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಇನ್ನೂ ಘೋಷಣೆ ಮಾಡಿಲ್ಲ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement