ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಭಾರೀ ಅಗ್ನಿಅವಘಡ : 14 ಅರ್ಚಕರಿಗೆ ಗಾಯ

ಉಜ್ಜಯಿನಿ : ಮಧ್ಯಪ್ರದೇಶದ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಸೋಮವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 14 ಅರ್ಚಕರಿಗೆ ಗಾಯವಾಗಿದೆ. ಆವರಣದಲ್ಲಿ ಹೋಳಿ ಆಚರಣೆಯ ನಡುವೆ ಮುಂಜಾನೆ ‘ಭಸ್ಮ ಆರತಿ’ ವೇಳೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೇವಾಲಯದ ಗರ್ಭಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಉಜ್ಜಯಿನಿ ಜಿಲ್ಲಧಿಕಾರಿ ನೀರಜಕುಮಾರ ಸಿಂಗ್ ಹೇಳಿದ್ದಾರೆ. “14 ಪುರೋಹಿತರಿಗೆ ಸುಟ್ಟ ಗಾಯಗಳಾಗಿವೆ. ಕೆಲವರು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಎಂಟು ಮಂದಿ ಇಂದೋರಿನಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ. ಜಿಲ್ಲಾ ಪಂಚಾಯತ ಸಿಇಒ ಮೃಣಾಲ್ ಮೀನಾ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಅನುಕೂಲ್ ಜೈನ್ ನೇತೃತ್ವದಲ್ಲಿ ಮೂರು ದಿನಗಳಲ್ಲಿ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.

ಕರ್ಪೂರ ಸುಡುವ ಪೂಜಾ ಥಾಲಿಯ ಮೇಲೆ ‘ಗುಲಾಲ್’ (ಆಚರಣೆಗಳಲ್ಲಿ ಬಳಸುವ ಬಣ್ಣದ ಪುಡಿ) ಬಿದ್ದಿದ್ದರಿಂದ ಬೆಂಕಿ ಹೊತ್ತಿಕೊಂಡಿತು. ಇದು ನಂತರ ನೆಲದ ಮೇಲೆ ಹರಡಿತು ಮತ್ತು ದೊಡ್ಡ ಬೆಂಕಿಯಾಗಿ ಮಾರ್ಪಟ್ಟಿತು ಎಂದು ಅವರು ಹೇಳಿದರು.
ದೇವಸ್ಥಾನದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಘಟನೆ ಸೆರೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಧಾರ್ಮಿಕ ಸಮಾರಂಭದ ಅಂಗವಾಗಿ ‘ಗುಲಾಲ್’ (ಆಚರಣೆಗಳು ಮತ್ತು ಹೋಳಿಗೆ ಬಳಸುವ ಬಣ್ಣದ ಪುಡಿ) ಎಸೆಯುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ ಯಾದವ್ ಅವರಿಂದ ಘಟನೆಯ ಮಾಹಿತಿ ಪಡೆದಿದ್ದಾರೆ. ಸ್ಥಳೀಯ ಆಡಳಿತವು ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಿದೆ ಎಂದು ಅವರು ಹೇಳಿದರು. “ಬೆಳಿಗ್ಗೆಯಿಂದ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇನೆ. ಎಲ್ಲವೂ ನಿಯಂತ್ರಣದಲ್ಲಿದೆ. ಎಲ್ಲಾ ಗಾಯಾಳುಗಳು ಶೀಘ್ರವಾಗಿ ಸಂಪೂರ್ಣ ಚೇತರಿಸಿಕೊಳ್ಳಲಿ ಎಂದು ಬಾಬಾ ಮಹಾಕಾಲ್ ಅವರ ಪ್ರಾರ್ಥನೆ ಎಂದು ಅವರು ಎಕ್ಸ್ ನಲ್ಲಿ ಬರೆದಿದ್ದಾರೆ.

ಪ್ರಮುಖ ಸುದ್ದಿ :-   70 ವರ್ಷ ಮೇಲ್ಪಟ್ಟ ಎಲ್ಲರಿಗೂ ₹5 ಲಕ್ಷದ ವರೆಗೆ ಉಚಿತ ಚಿಕಿತ್ಸೆ ; ಮೋದಿ ಸರ್ಕಾರದ ಮಹತ್ವದ ನಿರ್ಧಾರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement