ಮತ್ತೆ ಬಿಜೆಪಿಗೆ ಸೇರ್ಪಡೆಯಾದ ಜನಾರ್ದನ ರೆಡ್ಡಿ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು, ಸೋಮವಾರ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್​​.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸಮ್ಮುಖದಲ್ಲಿ ತಮ್ಮ ಪಕ್ಷ ಕೆಆರ್‌ಪಿಪಿಯನ್ನು ಬಿಜೆಪಿ ಜೊತೆ ವಿಲೀನ ಮಾಡಿದ್ದಾರೆ. ಪಕ್ಷ ವಿಲೀನ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮಿ ಸೇರಿ ಕೆಆರ್‌ಪಿಪಿ ಪಕ್ಷದ ಎಲ್ಲ ಪದಾಧಿಕಾರಿಗಳು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಕ್ಷದ ಶಾಲು ಹೊದಿಸಿ, ಭಾವುಟ ನೀಡಿ ಸ್ವಾಗತಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ನೋಡಲು ಪಕ್ಷದ ಹಲವಾರು ಸದಸ್ಯರೊಂದಿಗೆ ಬಿಜೆಪಿ ಸೇರುತ್ತಿರುವುದಾಗಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಮಾಜಿ ಸಚಿವರಾದ ಶ್ರೀರಾಮುಲು, ಆನಂದ ಸಿಂಗ್, ಸಿಟಿ ರವಿ, ಅಶ್ವತ್ಥನಾರಾಯಣ ಮೊದಲಾದವರು ಉಪಸ್ಥಿತರಿದ್ದರು.
ಶಾಸಕ ಜನಾರ್ದನ ರೆಡ್ಡಿ ಬಿಜೆಪಿ ಸೇರುವ ಮುನ್ನ ಕೆಆರ್‌ಪಿಪಿ ಪದಾಧಿಕಾರಿಗಳ ಜೊತೆಯಲ್ಲಿ ಭಾನುವಾರ ಸಭೆ ನಡೆಸಿದ್ದರು. ಪಕ್ಷದ ಎಲ್ಲರ ಒಪ್ಪಿಗೆ ಬಳಿಕವೇ ಸೇರ್ಪಡೆ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದರು. ಇದಕ್ಕೂ ಮೊದಲು ಜನಾರ್ದನ ರೆಡ್ಡಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಒಂದು ಸುತ್ತಿನ ಮಾತುಕತೆಯನ್ನು ಕೂಡ ನಡೆಸಿದ್ದರು.

ಪ್ರಮುಖ ಸುದ್ದಿ :-   ಪಾವಗಡ : ಆಂಬುಲೆನ್ಸ್ ಸಿಗದೆ ಬೈಕಿನಲ್ಲೇ ತಂದೆಯ ಶವ ಸಾಗಿಸಿದ ಪುತ್ರರು...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement