ಶಿರಸಿ: ಶಾಸಕ ಹೆಬ್ಬಾರ ಕಾಂಗ್ರೆಸ್‌ ಸೇರ್ಪಡೆಗೆ ವಿರೋಧ : ಕಾಂಗ್ರೆಸ್‌ ಕಚೇರಿಯಲ್ಲಿಯೇ ವಿರೋಧಿ ಪೋಸ್ಟರ್‌ ಅಂಟಿಸಿದ ಕಾರ್ಯಕರ್ತರು…!

ಶಿರಸಿ : ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಯೇ ಸೋಮವಾರ ಶಾಸಕ ಶಿವರಾಮ ಹೆಬ್ಬಾರ ವಿರೋಧಿ ಪೋಸ್ಟರ್ ಗಳನ್ನು ಅಂಟಿಸಲಾಗಿದೆ.
ಹೆಬ್ಬಾರ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಬಿಜೆಪಿ ನಾಯಕರಿಂದ ಹಾಗೂ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಹೆಬ್ಬಾರ ವಿರೋಧಿ ಪೋಸ್ಟರ್‌ಗಳನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪೋಸ್ಟರ್ ಅಂಟಿಸಿ ಅವರ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಲಾಗಿದೆ.

ಕಾಂಗ್ರೆಸ್‌ ಕಾರ್ಯಾಲಯದ ಗೋಡೆಯ ಮೇಲೆ ʼನಮ್ಮ‌‌ ಪಕ್ಷ, ನಮ್ಮ ಹಕ್ಕು, ಭ್ರಷ್ಟರಿಗಿಲ್ಲಿ ಜಾಗವಿಲ್ಲʼ ಎಂಬ ಪೋಸ್ಟರ್ ಅಂಟಿಸಿ ವಿರೋಧ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷದ  ಅಭ್ಯರ್ಥಿ ಪರವಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಸೋಮವಾರ   ಕಾಂಗ್ರೆಸ್ ನಾಯಕರ ಸಭೆ ನಡೆದಿದ್ದು, ಅದಕ್ಕೂ ಮುಂಚಿತವಾಗಿ ಹೆಬ್ಬಾರ್ ವಿರುದ್ಧ ಪೊಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಸಭೆಯಲ್ಲಿಯೂ ಹೆಬ್ಬಾರ ಕಾಂಗ್ರೆಸ್‌ಗೆ ಮರಳಿ ಬರುವುದಕ್ಕೆ ಪರ ವಿರೋಧ ಚರ್ಚೆಗಳು ಜೋರಾಗಿ ನಡೆಯಿತು ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

ಕಾಂಗ್ರೆಸ್ ‌ನಿಂದ‌ ಬಿಜೆಪಿಗೆ ಹೋಗಿ ಸಚಿವರಾಗಿದ್ದ ಶಿವರಾಮ ಹೆಬ್ಬಾರ ಅವರು ಕಳೆದ ವಿಧಾನಸಭೆ ಚುನಾವಣೆ ನಂತರ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದಾರೆ. ರಾಜಕೆಲದಿನಗಳ ಹಿಂದೆ ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದಿಂದ ವಿಪ್‌ ಜಾರಿಯಾಗಿದ್ದರೂ ಮತದಾನಕ್ಕೆ ಹೋಗದೇ ಗೈರಾಗಿದ್ದರು. ಇದು ಚರ್ಚೆಗೆ ಗ್ರಾಸವಾದ ನಂತರ ಆರೋಗ್ಯದ ಕಾರಣದಿಂದ ಮತದಾನ ಮಾಡಲು ಹೋಗಿರಲಿಲ್ಲ ಎಂದು ಹೇಳಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಬನವಾಸಿ ಕದಂಬೋತ್ಸವಕ್ಕೆ ಬಂದಾಗಲೂ ಅವರಿಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಸ್ವಾಗತ ಕೋರಿಬೃಹತ್‌ ಫ್ಲೆಕ್ಸ್‌ಗಳನ್ನು ಹಾಕಿದ್ದರು. ಇದು ಸಹ ಚರ್ಚೆಗೆ ಗ್ರಾಸವಾಗಿತ್ತು.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement