ಮೋದಿ..ಮೋದಿ ಎಂದು ಕೂಗುವವರ ಕಪಾಳಕ್ಕೆ ಹೊಡೆಯಿರಿ ಎಂದ ಸಚಿವ ತಂಗಡಗಿ : ಚುನಾವಣೆ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಬೆಂಗಳೂರು: ಮೋದಿ ಮೋದಿ ಎಂದು ಕೂಗಿದವರ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಿರುದ್ಧ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ನಾಯಕರು ದೂರು ನೀಡಿದ್ದಾರೆ.
ಅವರನ್ನು ಚುನಾವಣ ಪ್ರಕ್ರಿಯೆ ಮತ್ತು ಕಾಂಗ್ರೆಸ್‌ ಪರ ಪ್ರಚಾರದಿಂದ ನಿರ್ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜಕುಮಾರ ಮೀನಾ ಅವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ ಅವರ ನೇತೃತ್ವದ ತಂಡವು, ಬಿಜೆಪಿಯ ಯುವ ಮತದಾರರ ವಿರುದ್ಧ ಸಚಿವರು ಪ್ರಚೋದನಾತ್ಮಕ ಹಾಗೂ ಬೆದರಿಕೆ ಉಂಟು ಮಾಡುವ ರೀತಿಯ ಮಾತುಗಳನ್ನಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ, ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಒಳಗೊಂಡ ಬಿಜೆಪಿ ನಿಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿನ್ನು ಭೇಟಿ ಮಾಡಿತು.

ಮೋದಿ ಮೋದಿ ಎಂದು ಕೂಗುವವರ ಕಪಾಳಕ್ಕೆ ಹೊಡೆಯಿರಿ ಎಂದ ಸಚಿವ ತಂಗಡಗಿ…
ಕಾರಟಗಿ: ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ವಾಗ್ದಾನ ಮಾಡಿದ್ದ ದೇಶದ ಪ್ರಧಾನಿ ಮೋದಿಯವರು, ಯುವಕರು ಉದ್ಯೋಗ ಕೇಳಿದರೆ ಪಕೋಡ ಮಾರಿ ಎಂದು ಬಿಟ್ಟಿ ಸಲಹೆ ನೀಡುತ್ತಾರೆ. ಹೀಗಾಗಿ “ಮೋದಿ, ಮೋದಿ’ ಎಂದು ಕೂಗುವ ಯುವಕರು ಮತ್ತು ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದು ತೀವ್ರ ವಿವಾದಕ್ಕೆ ಕಾರಣವಾಗಿದೆ.
ಭಾನುವಾರ ತಮ್ಮ ಗೃಹ ಕಚೇರಿಯಲ್ಲಿ ಲೋಕಸಭಾ ಚುನಾವಣೆ ನಿಮಿತ್ತ ಹಮ್ಮಿಕೊಂಡ ಕನಕಗಿರಿ ಕ್ಷೇತ್ರದ ಪಕ್ಷದ ಮುಖಂಡರು, ಕಾರ್ಯಕರ್ತರು, ಚುನಾಯಿತ ಜನಪ್ರತಿನಿಧಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಬಿಜೆಪಿ ಬರೀ ಸುಳ್ಳು ಹೇಳುತ್ತಲೇ ಜನರನ್ನು ವಂಚಿಸುತ್ತಿದೆ. 18 ಸಾವಿರ ಕೋಟಿ ರೂ. ಬರ ಪರಿಹಾರವನ್ನು ರಾಜ್ಯ ಸರಕಾರ ಕೇಳಿ 6 ತಿಂಗಳು ಕಳೆದರೂ 1 ರೂಪಾಯಿಯನ್ನೂ ನೀಡಿಲ್ಲ. ಹೀಗಾಗಿ ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಅಲ್ಲಿಯಾದರೂ ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement