ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ : ರಾಜುಗೌಡಗೆ ಬಿಜೆಪಿ ಟಿಕೆಟ್‌

ಬೆಂಗಳೂರು: ಕಾಂಗ್ರೆಸ್ ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದ ನಂತರ ತೆರುವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7 ರಂದು ಉಪಚುನಾವಣೆ ನಡೆಯಲಿದ್ದು, ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ರಾಜುಗೌಡ ಅವರಿಗೆ ಮತ್ತೆ ಟಿಕೆಟ್‌ ನೀಡಿದೆ. ಕಾಂಗ್ರೆಸ್ ಶಾಸಕರಾಗಿದ್ದ ದಿವಂಗತ ರಾಜ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ಈಗಾಗಲೆ ಟಿಕೆಟ್ ನೀಡಿದೆ. 2023ರಲ್ಲಿ ನಡೆದ ಚುನಾವಣೆಯಲ್ಲಿ ರಾಜೂಗೌಡ ಅವರು 25223 ಮತಗಳ ಅಂತರದಿಂದ ಸೋತಿದ್ದರು. ಆದರೆ, 2018ರ ಚುನಾವಣೆಯಲ್ಲಿ ರಾಜುಗೌಡ ಗೆದ್ದಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಅವರಿಗೆ ಬಿಜೆಪಿ ಮತ್ತೆ ಟಿಕೆಟ್‌ ನೀಡಿದೆ. ಮೇ 7 ರಂದು ಲೋಕಸಭೆ ಚುನಾವಣೆಯೊಟ್ಟಿಗೇ ಈ ವಿಧಾನಸಭೆ ಕ್ಷೇತ್ರದಲ್ಲಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್‌ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಅವರಿಗೆ ಅನುಕಂಪದ ಅಲೆ ಇದ್ದರೆ ಬಿಜೆಪಿಯು ಪ್ರಧಾನಿ ಮೋದಿ ಹಾಗೂ ಯಡಿಯೂರಪ್ಪ ಅವರ ಜನಪ್ರಿಯತೆಯನ್ನು ನಂಬಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲಗೆ ಜಾಮೀನು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement