ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಮತ್ತಿಬ್ಬರು ಎನ್ ​​​ಐಎ ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಈ ಇಬ್ಬರು ವ್ಯಕ್ತಿಗಳು ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ವ್ಯಕ್ತಿಯ ಜೊತೆಗೆ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದ್ದು, ಶನಿವಾರ ಸಂಜೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಬಾಂಬರ್ ಸುಳಿವು ಪತ್ತೆ ಹಚ್ಚಿದ ನಂತರ ಆತನ ಸಂಪರ್ಕ ಹೊಂದಿದ್ದ ಇವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟ ಮುಖ್ಯ ಆರೋಪಿಗಾಗಿ ತೀವ್ರ ಹುಡುಕಾಟ ನಡೆಸಿರುವ ರಾಷ್ಟ್ರೀಯ ಭದ್ರತಾ ಸಂಸ್ಥೆ (ಎನ್‌ಐಎ) ಈಗಾಗಲೇ ಆತನ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದೆ ಹಾಗೂ ಆತನ ಚಿತ್ರವನ್ನೂ ಬಿಡುಗಡೆ ಮಾಡಿದೆ.

ಮಾರ್ಚ್ 1 ರಂದು ಕರ್ನಾಟಕದ ವೈಟ್‌ಫೀಲ್ಡಿನಲ್ಲಿರುವ ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ ರೆಸ್ಟೋರೆಂಟ್‌ನಲ್ಲಿ ಸ್ಫೋಟ ಸಂಭವಿಸಿತ್ತು. ರೆಸ್ಟೋರೆಂಟ್​ನ ಇಬ್ಬರು ಕೆಲಸಗಾರರು ಸೇರಿದಂತೆ 10 ಮಂದಿ ಗಾಯಗೊಂಡಿದ್ದರು. ಈ ಘಟನೆಯು ದೇಶಾದ್ಯಂತ ಸಂಚಲನ ಮೂಡಿಸಿತ್ತು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸ್ಫೋಟದ ಬಗ್ಗೆ ತನಿಖೆ ವಹಿಸಿಕೊಂಡಿದ್ದು, ಬೆಂಗಳೂರಿನ ವೈಟ್​ಫಿಲ್ಡ್​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್​ 1 ರಂದು ಸ್ಪೋಟ ಸಂಭವಿಸಿತ್ತು. ಈ ಪ್ರಕರಣವನ್ನು ಪ್ರಾರಂಭದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಬಳಿಕ, ಪ್ರಕರಣ ತನಿಖೆಯನ್ನು ಎನ್​ಐಎಗೆ ವಹಿಸಲಾಗಿದೆ.
ಪ್ರಕರಣ ತನಿಖೆ ನಡೆಸುತ್ತಿರುವ ಎನ್​ಐಎ ಅಧಿಕಾರಿಗಳು, ಈ ಸಂಬಂಧ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement