ಎಎಪಿಗೆ ಆಘಾತ: ಪಕ್ಷದ ಏಕೈಕ ಲೋಕಸಭಾ ಸದಸ್ಯ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಆಮ್‌ ಆದಮಿ ಪಕ್ಷಕ್ಕೆ ಆಘಾತದಲ್ಲಿ ಪಂಜಾಬಿನ ಆಮ್ ಆದ್ಮಿ ಪಕ್ಷದ ಏಕೈಕ ಲೋಕಸಭಾ ಸದಸ್ಯ ಸುಶೀಲಕುಮಾರ ರಿಂಕು ಅವರು ಪಕ್ಷದ ಶಾಸಕ ಶೀತಲ ಅಂಗುರಲ್ ಅವರೊಂದಿಗೆ ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಅಂಗುರಲ್ ಅವರು ಜಲಂಧರ್ ಪಶ್ಚಿಮ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಜಲಂಧರ ಸಂಸದ ಸುಶೀಲಕುಮಾರ ರಿಂಕು ಅವರೊಂದಿಗೆ ಶಾಸಕರು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಪಂಜಾಬ್‌ನ ಅಭಿವೃದ್ಧಿಗಾಗಿ, ವಿಶೇಷವಾಗಿ ತನ್ನ ಸಂಸದೀಯ ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿಗೆ ಸೇರುತ್ತಿದ್ದೇನೆ ಎಂದು ಜಲಂಧರ ಸಂಸದರು ಹೇಳಿದರು ಮತ್ತು ರಾಜ್ಯದ ಎಎಪಿ ಸರ್ಕಾರವು ಅಭಿವೃದ್ಧಿ ಕಾರ್ಯಗಳಲ್ಲಿ ತನಗೆ ಸಹಾಯ ಮಾಡುತ್ತಿಲ್ಲ ಎಂದು ಆರೋಪಿಸಿದರು. ತಾನು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅಭಿವೃದ್ಧಿ ಉಪಕ್ರಮಗಳಿಗಾಗಿ ಬಿಜೆಪಿ ಸೇರುತ್ತಿದ್ದೇನೆ ಎಂದು ಅವರು ಹೇಳಿದರು.

ಕೆಲವೇ ದಿನಗಳ ಹಿಂದೆ, ಪಂಜಾಬ್‌ನಿಂದ ಲೋಕಸಭೆ ಚುನಾವಣೆಗೆ ಎಂಟು ಅಭ್ಯರ್ಥಿಗಳ ಆಪ್‌ನ ಮೊದಲ ಪಟ್ಟಿಯಲ್ಲಿ ರಿಂಕು ಅವರನ್ನು ಜಲಂಧರ್‌ನಿಂದ ಕಣಕ್ಕಿಳಿಸಲಾಗಿತ್ತು. ಸಂಸದರು ಕಳೆದ ವರ್ಷ ಜಲಂಧರ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ತೊರೆದು ಎಎಪಿ ಸೇರಿದ್ದರು.
ಬಿಜೆಪಿಯು ಪಂಜಾಬ್‌ನಲ್ಲಿ 13 ಕ್ಷೇತ್ರಗಳೊಂದಿಗೆ ರಾಜ್ಯದಲ್ಲಿ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲು ವಿವಿಧ ಪಕ್ಷಗಳ ಹಲವಾರು ಪ್ರಭಾವಿ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಹಿಂದಿನ ಜಗನ್ ಸರ್ಕಾರ ಆಡಳಿತದಲ್ಲಿ ತಿರುಪತಿ ಲಡ್ಡಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿತ್ತು ; ಚಂದ್ರಬಾಬು ನಾಯ್ಡು ಗಂಭೀರ ಆರೋಪ

ಕಳೆದ ವರ್ಷ ಆಗಸ್ಟ್‌ನಲ್ಲಿ ನಡೆದ ಮಣಿಪುರ ಹಿಂಸಾಚಾರದ ವಿಚಾರದಲ್ಲಿ ಸಂಸತ್ತಿನ ಮುಂಗಾರು ಅಧಿವೇಶನದ ಸಂದರ್ಭದಲ್ಲಿ ಸದನದಲ್ಲಿ ನಡೆದ ಗದ್ದಲಕ್ಕೆ ಸಂಬಂಧಿಸಿದಂತೆ ಎಎಪಿ ಏಕೈಕ ಲೋಕಸಭಾ ಸಂಸದ ಸುಶೀಲಕುಮಾರ ರಿಂಕು ಅವರನ್ನು ಸದನದಿಂದ ಅಮಾನತುಗೊಳಿಸಲಾಗಿತ್ತು.
ದೆಹಲಿ ಸೇವಾ ಮಸೂದೆ ಅಥವಾ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ (ತಿದ್ದುಪಡಿ) ಮಸೂದೆ, 2023 ಅನ್ನು ಲೋಕಸಭೆಯಲ್ಲಿ ಅಂಗೀಕರಿಸಿದ ನಂತರ ಅವರು ಸಭಾಧ್ಯಕ್ಷ ಮೇಲೆ ಪೇಪರ್‌ಗಳನ್ನು ಎಸೆದ ನಂತರ ಅವರನ್ನು ಅಮಾನತುಗೊಳಿಸಲಾಗಿತ್ತು.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement