ಸರ್ವರಿಗೂ ಕ್ರೋಧಿ ಸಂವತ್ಸರದ ಯುಗಾದಿಯ ಹಾರ್ದಿಕ ಶುಭಾಶಯಗಳು

ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

ಹುಬ್ಬಳ್ಳಿ: ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ವಿರುದ್ದ ತಿರುಗಿ ಬಿದ್ದಿರುವ 40ಕ್ಕೂ ಅಧಿಕ ಮಠಾಧೀಶರು ಮಾರ್ಚ್‌ 31ರ ಒಳಗೆ ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸಿ ಎಲ್ಲ ಸಮುದಾಯದವರೂ ಒಪ್ಪುವ ಸೂಕ್ತ ಅಭ್ಯರ್ಥಿಗೆ ಟಿಕೆಟ್‌ ನೀಡಬೇಕು ಎಂದು ಬಿಜೆಪಿಯ ಹೈಕಮಾಂಡ್‍ಗೆ ಗಡುವು ನೀಡಿದ್ದಾರೆ.
ಹುಬ್ಬಳ್ಳಿಯ ಮೂರುಸಾವಿರಮಠದಲ್ಲಿ ಬುಧವಾರ ಮೂರುಸಾವಿರಮಠದ ಜಗದ್ಗುರು ಡಾ.ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ, ಶಿರಹಟ್ಟಿ ಶ್ರೀ ಫಕೀರ ಸಂಸ್ಥಾನಮಠದ ಜಗದ್ಗುರು ಶ್ರಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಧಾರವಾಡ ಮುರುಘಾಮಠದ ಸ್ವಾಮೀಜಿ ಸಹಿತ 40ಕ್ಕೂ ಅಧಿಕ ಸ್ವಾಮೀಜಿಗಳು ಚಿಂತನ-ಮಂಥನ ಸಭೆ ನಡೆಸಿದ ನಂತರ ಈ ತೀರ್ಮಾನ ಪ್ರಕಟಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿರಹಟ್ಟಿ ಫಕೀರೇಶ್ವರ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ  ಎಲ್ಲ ಸಮಾಜವನ್ನೂ ನಿರ್ಲಕ್ಷ್ಯ ಮಾಡಿದ್ದಾರೆ.. ಸ್ವಾಮೀಜಿಗಳನ್ನು ಅಪಮಾನಗೊಳಿಸಿದ್ದಾರೆ. ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ಅವರಿಗೆ ನೀಡಿರುವ ಟಿಕೆಟ್ ಅನ್ನು ಬಿಜೆಪಿ ವರಿಷ್ಠರು ಮಾರ್ಚ್‌ 31ರ ಒಳಗೆ ಬದಲಾವಣೆ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರಹ್ಲಾದ ಜೋಶಿ ಅವರಿಗೆ ಅಧಿಕಾರ ಮತ್ತು ಹಣದ ಮದವೇರಿದೆ. ಎಲ್ಲ ಸಮುದಾಯವರನ್ನೂ ನಿರ್ಲಕ್ಷ್ಯ ಮಾಡಿದ್ದಾರೆ. ಸ್ವಾಮೀಜಿಗಳನ್ನೂ ಅವಮಾನಿಸಿದ್ದಾರೆ ಎಂದ ಅವರು, ನಮ್ಮ ವಿರೋಧ ಅವರ ವ್ಯಕ್ತಿತ್ವದ ಬಗ್ಗೆಯೇ ಹೊರತು ಪಕ್ಷ ಅಥವಾ ಯಾವುದೇ ಸಮಾಜದ ಬಗ್ಗೆ ಅಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಮುಖ ಸುದ್ದಿ :-   ಜೇನು ಹುಳುಗಳ ದಾಳಿಯಿಂದ 30ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯ : ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಮಾರ್ಚ 31ರ ಒಳಗೆ ಧಾರವಾಡ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಹ್ಲಾದ ಜೋಶಿಯವರನ್ನು ಬಿಜೆಪಿ ವರಿಷ್ಠರು ಬದಲಿಸಬೇಕು, ಇಲ್ಲದೆ ಹೋದರೆ ಏಪ್ರಿಲ್‌ 2ರಂದು ಎಲ್ಲ ಸ್ವಾಮೀಜಿಗಳು ಮತ್ತೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಎಚ್ಚರಿಸಿದರು.
ಚುನಾವಣಾ ಬಂದಾಗ ಮಾತ್ರ ಕೇಂದ್ರ ಸಚಿವರಾಗಿರುವ ಪ್ರಹ್ಲಾದ ಜೋಶಿ ಅವರಿಗೆ ಸ್ವಾಮೀಜಿಗಳು ನೆನಪಾಗುತ್ತಾರೆ. ರಾಜಕಾರಣಿಗಳು ತಿಳಿದು ರಾಜಕಾರಣ ಮಾಡಬೇಕೇ ಹೊರತು ಇತರರನ್ನು ತುಳಿದು ರಾಜಕಾರಣ ಮಾಡಬಾರದು. ಸ್ವಾಮೀಜಿಗಳಾದ ನಾವು ಯಾವುದೇ ಪಕ್ಷದ ವಿರೋಧಿಗಳಲ್ಲ, ವ್ಯಕ್ತಿಯ ವ್ಯಕ್ತಿತ್ವದ ವಿರೋಧಿಗಳು, ಅದಕ್ಕೆ ಕಾರಣ ಪ್ರಹ್ಲಾದ ಜೋಶಿ ಅವರ ನಡೆ, ನುಡಿಗಳು. ವ್ಯಕ್ತಿ ಪ್ರಜ್ಞೆಗಿಂತ ಸಮಷ್ಠಿಪ್ರಜ್ಞೆ ಎಂಬ ಅರವು ನಮಗಿದೆ ಎಂದು ಅವರು ಹೇಳಿದರು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement