ಲೋಕಸಭೆ ಚುನಾವಣೆ : ಮೂರು ಕ್ಷೇತ್ರಗಳಿಗೆ ಜೆಡಿಎಸ್‌ ಅಭ್ಯರ್ಥಿಗಳು ಅಂತಿಮ

ಹಾಸನ/ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಅಂತಿಮ ಮಾಡಿದೆ.
ತಮಗೆ ನೀಡಿರುವ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಯಾರೆಂದು ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡ ಅವರು ಹಾಸನದಲ್ಲಿ ಪ್ರಕಟಿಸಿದ್ದಾರೆ.
ಹಾಸನದಿಂದ ಪ್ರಜ್ವಲ ರೇವಣ್ಣ, ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೋಲಾರದಿಂದ ಮಲ್ಲೇಶ ಬಾಬು ಅವರು ಜೆಡಿಎಸ್‌ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ’ ಎಂದು ಮಾಜಿ ಪ್ರಧಾನಿ ದೇವೇಗೌಡ ಪಕ್ಷದ ಸಭೆಯಲ್ಲಿ ಹೇಳಿದ್ದಾರೆ.
ಮಂಡ್ಯ ಕ್ಷೇತ್ರದ ಬಗ್ಗೆ ಪಕ್ಷ ಗಂಭೀರವಾಗಿದ್ದು, ಜೆಡಿಎಸ್ ಕಾರ್ಯಕರ್ತರು ಚೆನ್ನೈನಲ್ಲಿ ಎಚ್.ಡಿ.ಕುಮಾರಸ್ವಾಮಿ ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿ, ಪಕ್ಷ ಹಾಗೂ ಕಾರ್ಯಕರ್ತರ ಹಿತದೃಷ್ಟಿಯಿಂದ ಮಂಡ್ಯದಿಂದ ಸ್ಪರ್ಧಿಸುವಂತೆ ಒತ್ತಡ ಹೇರಿದ್ದಾರೆ. ಇತ್ತೀಚೆಗೆ ಸಭೆ ಸೇರಿದ್ದ ಪಕ್ಷದ ಕೋರ್ ಕಮಿಟಿ ಕೂಡ ಈ ಬಗ್ಗೆ ಒಮ್ಮತದ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಕೋಲಾರದಿಂದ ಮಲ್ಲೇಶ ಬಾಬು ಹಾಗೂ ಹಾಸನದಿಂದ ಪ್ರಜ್ವಲ್ ರೇವಣ್ಣ ಅವರು ಜೆಡಿಎಸ್‌ ನಿಂದ ಕಣಕ್ಕಿಳಿಯಲಿದ್ದಾರೆ ಎಂದು ದೇವೇಗೌಡರು ಹೇಳಿದ್ದಾರೆ.
ಅಭ್ಯರ್ಥಿಗಳ ಹೆಸರು ಅಧಿಕೃತವಾಗಿ ಬುಧವಾರ ಪ್ರಕಟಗೊಳ್ಳುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement