ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆ

ಕಾಸರಗೋಡು : ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ.ಗಳನ್ನು ದರೋಡೆ ಮಾಡಿದ ಘಟನೆ ಬುಧವಾರ ಮಧ್ಯಾಹ್ನ ಕೇರಳ ಕಾಸರಗೋಡಿನ ಉಪ್ಪಳ ಪೇಟೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ವಾಹನದ ಗಾಜನ್ನು ಒಡೆದು ಹಣ ದರೋಡೆ ಮಾಡಿದ್ದಾರೆ. ಉಪ್ಪಳ ಪೇಟೆಯಲ್ಲಿರುವ ಆಕ್ಸಿಸ್ ಬ್ಯಾಂಕಿನ ಎಟಿಎಂ ಯಂತ್ರಕ್ಕೆ ಹಣ ತುಂಬಿಸಲು ಬಂದಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
ವಾಹನದಲ್ಲಿದ್ದ ನೌಕರರು ವಾಹನ ನಿಲ್ಲಿಸಿ ಎ ಟಿ ಎಂ ಮೆಷಿನ್ ತೆರೆದು ವಾಹನದಲ್ಲಿದ್ದ ಹಣದ ಬಾಕ್ಸನ್ನು ತೆಗೆದುಕೊಂಡು ಹೋಗಲು ಮರಳಿ ಬಂದಾಗ ವಾಹನದ ಗಾಜು ಪುಡಿಪುಡಿಯಾದ ಸ್ಥಿತಿಯಲ್ಲಿ ಕಂಡುಬಂದಿದೆ . ಪರಿಶೀಲಿಸಿದಾಗ ಸುಮಾರು 50 ಲಕ್ಷ ರೂ.ಗಳಿದ್ದ ಬಾಕ್ಸ್ ನಾಪತ್ತೆಯಾಗಿತ್ತು.

ಖಾಸಗಿ ಏಜೆನ್ಸಿಯ ವಾಹನದ ಹಿಂಬದಿಯ ಲಾಕರ್ ನಲ್ಲಿ ಇಡಲಾಗಿದ್ದ ಹಣವನ್ನು ಉಪ್ಪಳದ ಎ ಟಿ ಎಂ ನಲ್ಲಿ ತುಂಬಿಸಲು ಮಧ್ಯಭಾಗದ ಸೀಟಿನಲ್ಲಿಟ್ಟು ವಾಹನದ ಗಾಜು ಲಾಕ್ ಹಾಕಿ ಎ ಟಿ ಎಂ ಕೌಂಟರ್ ಗೆ ನೌಕರರು ತೆರಳಿದ್ದರು. ಈ ಸಂದರ್ಭದಲ್ಲಿ ಗಾಜನ್ನು ಒಡೆದು ಈ ಕೃತ್ಯಎಸಗಲಾಗಿದೆ ಎಂದು ಹೇಳಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು , ವಾಹನದ ಚಾಲಕ ಮತ್ತು ನೌಕರನನ್ನು ವಿಚಾರಣೆ ನಡೆಸಲಾಗುತ್ತಿದೆ. ಸಮೀಪದ ಸಿ ಸಿ ಟಿವಿ ಕ್ಯಾಮರಾ ಮೂಲಕ ಮಾಹಿತಿ ಕಲೆ ಹಾಕಲಾಗುತ್ತಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement