ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಡೆದಿದೆ ಎಂದು ವರದಿಯಾಗಿದೆ.
ಮಾರ್ಚ್‌ 27ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬಂದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೇರೆ ಬೇರೆ ಕಡೆಗಳಿಂದ ವಿದ್ಯಾರ್ಥಿಗಳು ರಾಗಿಗುಡ್ಡದ ಪರಿಕ್ಷಾ ಕೇಂದ್ರಕ್ಕೆ ಇದ್ದ ಶಾಲೆಗೆ ಬಂದಿದ್ದರು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ರಾಗಿಗುಡ್ಡ ಮತ್ತು ಸಾರಕ್ಕಿ ಏರಿಯಾ ವಿದ್ಯಾರ್ಥಿಗಳ ನಡುವೆ ಗಲಾಟೆ ಆರಂಭವಾಗಿದೆ ಎನ್ನಲಾಗಿದೆ. ಅದು ಅಷ್ಟಕ್ಕೆ ಮುಗಿಯದೆ ಪರೀಕ್ಷೆ ಮುಗಿಸಿಕೊಂಡು ಹೋಗುವಾಗ ಮತ್ತೆ ಜಗಳ ನಡೆದಿದ್ದು ಗಲಾಟೆಯಲ್ಲಿ ಸಾರಕ್ಕಿಯ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿಯಲಾಗಿದೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ಕೆಲವು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದ್ದು, ಈ ಕುರಿತು ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement