ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಬೆಂಗಳೂರು : ಕರ್ನಾಟಕದಲ್ಲಿ ತಾಪಮಾನ ಏರುತ್ತ ಸಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಳೆ ಬಂದಿದ್ದರೂ ಧಗೆ ಕಡಿಮೆಯಾಗಿಲ್ಲ. ಹೀಗಾಗಿ ಏರುತ್ತಿರುವ ತಾಪಮಾನದಿಂದ ಎಚ್ಚರ ವಹಿಸುವಂತೆ ಆರೋಗ್ಯ ಇಲಾಖೆ (Health Department) ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮುಂದಿನ ನಾಲ್ಕೈದು ದಿನ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ನಿತ್ಯ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ತಾಪಮಾನ ಕಂಡು ಬರಲಿದೆ ಎಂದು ತಿಳಿಸಿದೆ. ಬಿರು ಬಿಸಿಲಿಗೆ ನಗರದ ಜನ ಬಸವಳಿದು ಹೋಗಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತಾಪಮಾನ (Temperature) ಏರಿಕೆ ಕಂಡಿದ್ದು, ಇದರ ಬೆನ್ನಲ್ಲೇ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮುಂದಿನ ದಿನಗಳಲ್ಲಿ ಇದೇ ರೀತಿಯ ಗರಿಷ್ಠ ಬಿಸಿಲು ಇರಲಿದೆ. ಹಾಗಾಗಿ ಕೆಲ ದಿನ ತಾಪಮಾನ ಕಡಿಮೆಯಾಗುವ ವರೆಗೂ ಬೆಳಗ್ಗೆ 11 ರಿಂದ ಅಪರಾಹ್ನ 4 ಗಂಟೆಯವರೆಗೂ ಹೆಚ್ಚು ಬಿಸಿಲಿಗೆ ಮೈ ಒಡ್ಡದಂತೆ ಆರೋಗ್ಯ ಇಲಾಖೆ ಸೂಚಿಸಿದೆ.
ವಿಶೇಷವಾಗಿ ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ ಇರುವವರು, ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳು ರಣ ಬಿಸಿಲಿಗೆ ಮೈ ಒಡ್ಡದಂತೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ದೇಹದ ಉಷ್ಣತೆಯು 40 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚಾದರೆ ಗಂಭೀರ ಸಮಸ್ಯೆ ಎದುರಾಗುವ ಸಂಭವ ಇದೆ. ಕೆಲವು ಸಂದರ್ಭಗಳಲ್ಲಿ ಹೀಟ್ ಸ್ಟ್ರೋಕ್‌ ಆಗುವ ಸಾಧ್ಯತೆಗಳೂ ಇವೆ. ಇದರಿಂದ ಜೀವಕ್ಕೆಾಪಾಯವಾಗಬಹುದು. ಹೀಗಾಗಿ ಮುಂದಿನ ಕೆಲವು ದಿನ ತಾಪಮಾನ ಇಳಿಕೆಯವರೆಗೂ ಪೂರ್ವಾಹ್ನ 11 ರಿಂದ ಅಪರಾಹ್ನ 4 ಗಂಟೆಯವರೆಗೂ ಹೆಚ್ಚು ಬಿಸಿಲಿಗೆ ಮೈ ಒಡ್ಡದಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಪ್ರಮುಖ ಸುದ್ದಿ :-   ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

ದೇಹದಲ್ಲಿ ತಾಪಮಾನ ಏರಿಕೆಯಿಂದ ನಿರ್ಜಲೀಕರಣ ಹಾಗೂ ಉಸಿರಾಟದ ಸಮಸ್ಯೆ ಎದುರಾಗಲಿದೆ. ಹಾಗಾಗಿ ನೀರು, ಮಜ್ಜಿಗೆ, ಫ್ರೆಶ್ ಫ್ರೂಟ್ ಜ್ಯೂಸ್, ದೇಹಕ್ಕೆ ನೀರಿನಾಂಶ ನೀಡುವ ಹಣ್ಣುಗಳನ್ನು ಹೆಚ್ಚು-ಹೆಚ್ಚು ಸೇವಿಸಲು ವೈದ್ಯರು ಸಲಹೆ ನೀಡಿದ್ದಾರೆ. ಜೊತೆಗೆ ಯಾರದರೂ ಹೆಚ್ಚಿದ ಉಷ್ಣಾಂಶ ಹಾಗೂ ಪ್ರಜ್ಞೆ ತಪ್ಪುವ ಸ್ಥಿತಿಯಲ್ಲಿದ್ದರೆ ಬೆವರುವಿಕೆ ಸ್ಥಗಿತವಾದ್ರೆ ಸಹಾಯವಾಣಿ ಸಂಖ್ಯೆ: 108/102ಗೆ ಕರೆ ಮಾಡುವಂತೆ ಆರೋಗ್ಯ ಇಲಾಖೆ ತಿಳಿಸಿದೆ.

 

 

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement