ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಅಧಿಕೃತ ಪ್ರಕ್ರಿಯೆ ಗುರುವಾರದಿಂದ ಆರಂಭವಾಗುತ್ತಿದೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಏ.26ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ (ಮಾರ್ಚ್‌ ೨೮) ಆರಂಭವಾಗಲಿದೆ. ಏಪ್ರಿಲ್‌ 4 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ.
ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ.8ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏ.26ರಂದು ಮತದಾನ ನಡೆಯಲಿದೆ. ಜೂ.4ರಂದು ಫಲಿತಾಂಶ ಹೊರಬೀಳಲಿದೆ.
ನಾಮಪತ್ರ ಸಲ್ಲಿಕೆಯಾಗುವ 14 ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್‌ ಮೈತ್ರಿ ಕೂಟ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದು, ಒಟ್ಟಾಗಿಯೇ ಚುನಾವಣೆ ಎದುರಿಸಲಿದೆ. ಬಿಜೆಪಿ ಪಾಲಿಗೆ ಬಂದ 11 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಜೆಡಿಎಸ್‌ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದು, ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ.

ಕಾಂಗ್ರೆಸ್‌ 11 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿರುವ ಕಾಂಗ್ರೆಸ್‌ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಾಮರಾಜನಗರ ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಬೇಕಿದೆ.
ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಕರ್ನಾಟಕದ ಲೋಕಸಭಾ ಕ್ಷೇತ್ರಗಳು : ದಕ್ಷಿಣ ಕನ್ನಡ, ಉಡುಪಿ – ಚಿಕ್ಕಮಗಳೂರು, ಚಿತ್ರದುರ್ಗ (ಎಸ್‌ಸಿ), ಚಿಕ್ಕಬಳ್ಳಾಪುರ, ಕೋಲಾರ (ಎಸ್‌ಸಿ), ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ,
ಬೆಂಗಳೂರು ದಕ್ಷಿಣ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ).

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement