ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ನವದೆಹಲಿ : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಸಂಚುಕೋರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ ಎಂದು ಗುರುವಾರ ಎನ್‌ಐಎ ಪ್ರಕಟಣೆ ತಿಳಿಸಿದೆ.
ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ನಡೆಸಿದ ನಂತರ ಮುಝಮ್ಮಿಲ್ ಷರೀಫ್‌ ಎಂಬಾತನನ್ನು ಬುಧವಾರ ಈ ಪ್ರಕರಣದ ಸಹ ಸಂಚುಕೋರ ಎಂಬ ಆರೋಪದ ಮೇಲೆ ಬಂಧಿಸಲಾಯಿತು ಎಂದು ಅದು ಹೇಳಿದೆ.

ಮಾರ್ಚ್ 3 ರಂದು ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಎನ್ ಐಎ, ಸ್ಫೋಟ ನಡೆಸಿದ ಪ್ರಮುಖ ಆರೋಪಿ ಮುಸ್ಸಾವಿರ್ ಶಜೀಬ್ ಹುಸೇನ್ ಎಂಬಾತನನ್ನು ಈ ಹಿಂದೆ ಗುರುತಿಸಿತ್ತು. ಇತರ ಪ್ರಕರಣಗಳಲ್ಲಿ ಎನ್‌ಐಎಗೆ ಬೇಕಾಗಿರುವ ಇನ್ನೊಬ್ಬ ಸಂಚುಕೋರ ಅಬ್ದುಲ್ ಮಥೀನ್ ತಾಹಾ ಎಂಬಾತನನ್ನು ಸಹ ಅದು ಗುರುತಿಸಿದೆ ಎಂದು ಹೇಳಿಕೆ ತಿಳಿಸಿದೆ. “ಇಬ್ಬರೂ ಪರಾರಿಯಾಗಿದ್ದಾರೆ” ಎಂದು ಅದು ಹೇಳಿದೆ.
ಮಾರ್ಚ್ 1 ರಂದು ಬೆಂಗಳೂರಿನ ಬ್ರೂಕ್‌ಫೀಲ್ಡ್‌ನ ಐಟಿಪಿಎಲ್ ರಸ್ತೆಯಲ್ಲಿರುವ ಕೆಫೆಯಲ್ಲಿ ಐಇಡಿ ಸ್ಫೋಟವನ್ನು ಒಳಗೊಂಡ ಪ್ರಕರಣದಲ್ಲಿ ಗುರುತಿಸಲಾದ ಇತರ ಇಬ್ಬರು ಆರೋಪಿಗಳಿಗೆ ಮುಝಮ್ಮಿಲ್ ಶರೀಫ್ ಎಂಬಾತ ಲಾಜಿಸ್ಟಿಕ್ ಬೆಂಬಲವನ್ನು ನೀಡಿದ್ದ ಎಂದು ಎನ್‌ಐಎ ತನಿಖೆಗಳು ಬಹಿರಂಗಪಡಿಸಿವೆ.

ಪ್ರಮುಖ ಸುದ್ದಿ :-   ಪತಿ ಸಾವಿನ ಸುದ್ದಿ ತಿಳಿದ ನಂತರವೂ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪತ್ನಿ

ಸ್ಫೋಟದಲ್ಲಿ ಹಲವಾರು ಗ್ರಾಹಕರು ಮತ್ತು ಹೋಟೆಲ್ ಸಿಬ್ಬಂದಿ ಗಾಯಗೊಂಡಿದ್ದರು. “ಈ ಮೂವರು ಆರೋಪಿಗಳ ಮನೆಗಳು ಮತ್ತು ಇತರ ಶಂಕಿತರ ವಸತಿ ಆವರಣಗಳು ಮತ್ತು ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ” ಎಂದು ಹೇಳಿಕೆ ತಿಳಿಸಿದೆ. ತಪಾಸಣೆಯ ವೇಳೆ ನಗದು ಸಹಿತ ವಿವಿಧ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಮತ್ತು ಸ್ಫೋಟದ ಹಿಂದಿನ ದೊಡ್ಡ ಪಿತೂರಿಯನ್ನು ಬಯಲಿಗೆಳೆಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಎನ್ಐಎ ತಿಳಿಸಿದೆ.

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement