ಮಾರ್ಚ್‌ 30ರಂದು ಪ್ರಥಮ ಪಿಯುಸಿ ಫಲಿತಾಂಶ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿ (KSEAB)ಯು 2023-24 ನೇ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶವು ಮಾರ್ಚ್‌ 30 (ಶನಿವಾರ)ರಂದು ಪ್ರಕಟವಾಗಲಿದೆ.
ವಿದ್ಯಾರ್ಥಿಗಳು ಮಂಡಳಿಯ ವೆಬ್‌ಸೈಟ್‌ karresults.nic.in ನಲ್ಲಿ ಫಲಿತಾಂಶವನ್ನು ಬೆಳಿಗ್ಗೆ 9 ರಿಂದ 11ರೊಳಗೆ ಪ್ರಕಟವಾಗಲಿದೆ ಎಂದು ತಿಳಿಸಲಾಗಿದೆ.
ಫೆ.12 ರಿಂದ 27ರ ವರೆಗೆ ಪಿಯುಸಿ ಪರೀಕ್ಷೆ ನಡೆದಿತ್ತು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದಿದ್ದು, ಫಲಿತಾಂಶ ಪ್ರಕಟಿಸಲು ಮಂಡಳಿ ಮುಂದಾಗಿದೆ. ಮಂಡಳಿಯ ವೆಬ್‌ಸೈಟ್‌ನಲ್ಲಿಯೂ ಫಲಿತಾಂಶಗಳು ಲಭ್ಯವಾಗಲಿದೆ. ಮಾರ್ಚ್ 30ರಂದು ಮೊಬೈಲ್‌ ಮೂಲಕ ಮನೆಯಲ್ಲಿಯೇ ಕುಳಿತು ಅಥವಾ ಇಂಟರ್ನೆಟ್ ಸೆಂಟರ್‌ಗಳಲ್ಲಿ ವೀಕ್ಷಿಸಲು ಅವಕಾಶವಿದೆ. ಅದೇ ದಿನ ಕಾಲೇಜುಗಳಲ್ಲಿಯೂ ಫಲಿತಾಂಶ ಪ್ರಕಟವಾಗಲಿದೆ. ಅಲ್ಲಿಯೂ ಕಾಲೇಜುಗಳಲ್ಲಿಯೂ ವಿದ್ಯಾರ್ಥಿಗಳು ವೀಕ್ಷಿಸಬಹುದು.
ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಅಥವಾ ಪರೀಕ್ಷೆ ಬರೆಯಲಾಗದವರಿಗೆ ಮೇ ತಿಂಗಳಲ್ಲಿ ಸಪ್ಲಿಮೆಂಟರಿ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಇದರ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಈ ಪರೀಕ್ಷೆಗೆ ಶುಲ್ಕ ತುಂಬಲು ಏಪ್ರಿಲ್ 20ರವರೆಗೆ ಅವಕಾಶ ಮಾಡಿಕೊಡಲಾಗಿದ್ದು, ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement