ಲೋಕಸಭೆ ಚುನಾವಣೆ : ಕರ್ನಾಟಕದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ; ಒಂದು ಕ್ಷೇತ್ರ ಇನ್ನೂ ಕಗ್ಗಂಟು

ಬೆಂಗಳೂರು : ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಕರ್ನಾಟಕದ ಕೋಲಾರ ಹೊರತು ಪಡಿಸಿ ಮೂರು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಾಕಿ ಉಳಿದಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಕೋಲಾರ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿಲ್ಲ.
ಬಳ್ಳಾರಿ ಲೋಕಸಭಾ ಟಿಕೆಟ್ ಅನ್ನು ಶಾಸಕ ಇ ತುಕರಾಂ, ಚಾಮರಾಜನಗರ ಕ್ಷೇತ್ರದ ಟಿಕೆಟ್​ ಸಚಿವ ಎಚ್​.ಸಿ. ಮಹಾದೇವಪ್ಪ ಅವರ ಪುತ್ರ ಸುನೀಲ ಬೋಸ್ ಅವರಿ​ಗೆ ನೀಡಲಾಗಿದೆ. ಚಿಕ್ಬಳ್ಳಾಪುರ ಕ್ಷೇತ್ರದ ಟಿಕೆಟ್‌ ಅನ್ನು ರಕ್ಷಾ ರಾಮಯ್ಯ ಅವರಿಗೆ ನೀಡಲಾಗಿದೆ. ಇದರೊಂದಿಗೆ ಕಾಂಗ್ರೆಸ್ ಒಟ್ಟು 28 ಕ್ಷೇತ್ರಗಳಲ್ಲಿ 27 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದಂತಾಗಿದೆ.
ಎಂ.ಎಸ್.ರಾಮಯ್ಯನವರ ಮೊಮ್ಮಗ ರಕ್ಷಾ ರಾಮಯ್ಯ ಅವರಿಗೆ ಚಿಕ್ಕಬಳ್ಳಾಪುರ ಟಿಕೆಟ್ ನೀಡಲಾಗಿದೆ. ಬಳ್ಳಾರಿ ಲೋಕಸಭಾ ಟಿಕೆಟ್ ಸಂಡೂರು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ತುಕರಾಂ ಅವರಿಗೆ ನೀಡಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಸಿದ್ದರಾಮಯ್ಯನವರ ಆಪ್ತ ಹಾಗೂ ಸಚಿವ ಡಾ.ಹೆಚ್​ಸಿ ಮಹದೇವಪ್ಪ ಅವರ ಪುತ್ರ ಸುನೀಲ ಬೋಸ್​ ಅವರಿಗೆ ಮಣೆ ಹಾಕಲಾಗಿದೆ. ಇದರೊಂದಿಗೆ ಕಾಂಗ್ರೆಸ್ 27 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ.
ಕೋಲಾರ ಟಿಕೆಟ್ ಕಾಂಗ್ರೆಸ್ಸಿಗೆ ಕಗ್ಗಂಟಾಗಿದೆ. ಸಚಿವ ಕೆ.ಎಚ್.​ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶಕುಮಾರ ಬಣದ ನಡುವೆ ಟಿಕೆಟ್​ಗಾಗಿ ಭಾರೀ ಪೈಪೋಟಿ ನಡೆದಿದೆ. ಇದರ ಮಧ್ಯೆ ಮುನಿಯಪ್ಪನವರ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಕೋಲಾರ ಟಿಕೆಟ್​ ಅಂತಿಮವಾಗಿದೆ ಎಂಬ ಸುದ್ದಿ ಹರಡುತ್ತಿದ್ದಂತೆಯೇ ಕೆಲ ಶಾಸಕರು ಹಾಗೂ ವಿದಾನ ಪರಿಷತ್‌ ಸದಸ್ಯರು ರಾಜೀನಾಮೆಗೆ ಮುಂದಾಗಿದ್ದರು.

ಪ್ರಮುಖ ಸುದ್ದಿ :-   ದೇವರಾಜೇಗೌಡಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ, ಬೇರೆ ಯಾರಿಗೂ ಕೊಟ್ಟಿಲ್ಲ : ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ ಹೇಳಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement