ವಯನಾಡಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮೇಲಿವೆ 242 ಪ್ರಕರಣಗಳು…

ಕೊಚ್ಚಿ : ಕೇರಳದ ವಯನಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಎನ್‌ಡಿಎ ಅಭ್ಯರ್ಥಿಯೂ ಆಗಿರುವ ಕೇರಳದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ವಿರುದ್ಧ 242 ಕ್ರಿಮಿನಲ್ ಪ್ರಕರಣಗಳಿವೆ.
ಶಾಸನಬದ್ಧ ಅವಶ್ಯಕತೆಗಳ ಭಾಗವಾಗಿ, ಸುರೇಂದ್ರನ್ ಅವರು ಇತ್ತೀಚೆಗೆ ತಮ್ಮ ಪ್ರಕರಣಗಳ ವಿವರಗಳನ್ನು ಪಕ್ಷದ ಮುಖವಾಣಿಯಲ್ಲಿ ಮೂರು ಪೂರ್ಣ ಪುಟಗಳಲ್ಲಿ ಪ್ರಕಟಿಸಿದ್ದರು.
ಅದೇ ರೀತಿ ಬಿಜೆಪಿ ಪಕ್ಷದ ಎರ್ನಾಕುಲಂ ಕ್ಷೇತ್ರದ ಅಭ್ಯರ್ಥಿ ಕೆ.ಎಸ್. ರಾಧಾಕೃಷ್ಣನ್ ವಿರುದ್ಧ ಸುಮಾರು 211 ಪ್ರಕರಣಗಳಿವೆ.

ಇವರ ಮೇಲಿನ ಹೆಚ್ಚಿನ ಪ್ರಕರಣಗಳು 2018ರಲ್ಲಿ ನಡೆದ ಶಬರಿಮಲೆ ಪ್ರತಿಭಟನೆಗೆ ಸಂಬಂಧಿಸಿವೆ. ಹೆಚ್ಚಿನ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಪಕ್ಷದ ಮುಖಂಡರು ಮುಷ್ಕರ ಅಥವಾ ಪ್ರತಿಭಟನೆಗೆ ಕರೆ ನೀಡಿದಾಗ ಪೊಲೀಸರು ಅದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುತ್ತಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕುರಿಯನ್ ಎಂದು ತಿಳಿಸಿದ್ದಾರೆ. ಅಭ್ಯರ್ಥಿಗಳ ವಿರುದ್ಧದ ಪ್ರಕರಣಗಳ ವಿವರಗಳನ್ನು ಪ್ರಕಟಿಸುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದರು.

ಏತನ್ಮಧ್ಯೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರು ಶುಕ್ರವಾರ ಸುರೇಂದ್ರನ್, ರಾಧಾಕೃಷ್ಣನ್, ಪಕ್ಷದ ಅಲಪ್ಪುಳದ ಅಭ್ಯರ್ಥಿ ಶೋಭಾ ಸುರೇಂದ್ರನ್ ಮತ್ತು ವಟಕರ ಅಭ್ಯರ್ಥಿ ಪ್ರಫುಲ್ ಕೃಷ್ಣ ವಿರುದ್ಧದ ಪ್ರಕರಣಗಳ ವಿವರಗಳನ್ನು ಟ್ವೀಟ್ ಮಾಡಿದ್ದಾರೆ ಮತ್ತು “ಭಾರತದ ಕೆಲವು ಭಾಗಗಳಲ್ಲಿ ರಾಷ್ಟ್ರೀಯವಾದಿಯಾಗುವುದು ಕಷ್ಟ” ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್‌ ವಿರುದ್ಧದ ಪ್ರಕರಣಗಳ ವಿವರವನ್ನು ನೀಡಿದ ಕುರಿಯನ್, ಶಬರಿಮಲೆ ಪ್ರತಿಭಟನೆಗೆ ಸಂಬಂಧಿಸಿದಂತೆ 237 ಪ್ರಕರಣಗಳು ಮತ್ತು ಕೇರಳದಲ್ಲಿ ವಿವಿಧ ಆಂದೋಲನಗಳಿಗೆ ಸಂಬಂಧಿಸಿದಂತೆ ಐದು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಉಗ್ರರ ದಾಳಿಯಲ್ಲಿ ಓರ್ವ ವಾಯುಪಡೆ ಸಿಬ್ಬಂದಿ ಹುತಾತ್ಮ, 5 ಮಂದಿಗೆ ಗಾಯ

ಪತ್ತನಂತಿಟ್ಟ ಜಿಲ್ಲೆಯ ಬೆಟ್ಟದ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶದ ಕುರಿತು ಸುಪ್ರೀಂ ಕೋರ್ಟ್ ಆದೇಶವನ್ನು ಜಾರಿಗೊಳಿಸುವ ಕೇರಳ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ಮತ್ತು ಅಂಗಸಂಸ್ಥೆಗಳು 2018 ರಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಆಯೋಜಿಸಿದ್ದವು. ಇತರೆ ಪಕ್ಷದ ಅಭ್ಯರ್ಥಿಗಳ ಪ್ರಕರಣದ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.
ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 5 ರಂದು ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಏಪ್ರಿಲ್ 8 ಕೊನೆಯ ದಿನಾಂಕವಾಗಿದೆ.
ಶುಕ್ರವಾರದ ವರೆಗೆ ಚುನಾವಣಾ ಆಯೋಗಕ್ಕೆ 18 ನಾಮಪತ್ರಗಳು ಬಂದಿವೆ. ಕೊಲ್ಲಂನಿಂದ ಎಡ ಅಭ್ಯರ್ಥಿ ಎಂ ಮುಖೇಶ ಮತ್ತು ಕಾಸರಗೋಡಿನಿಂದ ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂ.ಎಲ್. ನಾಮಪತ್ರ ಸಲ್ಲಿಸಿದ ಪ್ರಮುಖ ಹೆಸರುಗಳು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement