ಲೋಕಸಭೆ ಚುನಾವಣೆ : ಏಪ್ರಿಲ್ 19 ರಿಂದ ಜೂನ್ 1 ರ ನಡುವೆ ಚುನಾವಣಾ ಸಮೀಕ್ಷೆಗಳಿಗೆ ನಿರ್ಬಂಧ

ನವದೆಹಲಿ : ಲೋಕಸಭೆ ಚುನಾವಣೆ 2024 ಮತ್ತು ಆಂಧ್ರಪ್ರದೇಶ, ಅರುಣಾಚಲಪ್ರದೇಶ, ಒಡಿಶಾ ಮತ್ತು ಸಿಕ್ಕಿಂದಲ್ಲಿ ನಿಗದಿಯಾಗಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಚುನಾವಣಾ (ಚುನಾವಣೋತ್ತರ) ಸಮೀಕ್ಷೆಗಳನ್ನು ನಡೆಸುವುದು, ಪ್ರಕಟಿಸುವುದು ಅಥವಾ ಪ್ರಚಾರ ಮಾಡುವುದನ್ನು ನಿಷೇಧಿಸಿ ಚುನಾವಣಾ ಆಯೋಗವು ಶುಕ್ರವಾರ (ಮಾರ್ಚ್ 29) ಅಧಿಸೂಚನೆ ಹೊರಡಿಸಿದೆ.
ನಿಷೇಧದ ಅವಧಿಯು ಏಪ್ರಿಲ್ 19 ರಂದು ಬೆಳಿಗ್ಗೆ 7 ರಿಂದ ಪ್ರಾರಂಭವಾಗಲಿದೆ ಮತ್ತು ಜೂನ್ 1 ರಂದು ಸಂಜೆ 6:30 ಕ್ಕೆ ಮುಕ್ತಾಯಗೊಳ್ಳುತ್ತದೆ. ಈ ನಿರ್ಬಂಧವು ಮುದ್ರಣ, ಎಲೆಕ್ಟ್ರಾನಿಕ್ ಅಥವಾ ಯಾವುದೇ ಇತರ ಪ್ರಸರಣ ವಿಧಾನ ಸೇರಿದಂತೆ ಎಲ್ಲಾ ರೀತಿಯ ಮಾಧ್ಯಮಗಳಿಗೆ ಅನ್ವಯಿಸುತ್ತದೆ.

ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗಳ ಮತದಾನ ಪ್ರಕ್ರಿಯೆಯ ಮುಕ್ತಾಯದವರೆಗೆ 48 ಗಂಟೆಗಳ ಅವಧಿಯಲ್ಲಿ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಅಭಿಪ್ರಾಯ ಸಂಗ್ರಹದ ಫಲಿತಾಂಶಗಳು ಅಥವಾ ಯಾವುದೇ ಇತರ ಸಮೀಕ್ಷೆ ಸೇರಿದಂತೆ ಯಾವುದೇ ಚುನಾವಣಾ ಸಂಬಂಧಿತ ವಿಷಯವನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.
543 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಸುಮಾರು 97 ಕೋಟಿ ಮತದಾರರು ಸಾರ್ವತ್ರಿಕ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಪ್ರಮುಖ ಸುದ್ದಿ :-   ಬೆಂಬಲ ಹಿಂಪಡೆದ ಮೂವರು ಪಕ್ಷೇತರ ಶಾಸಕರು : ಸಂಕಷ್ಟದಲ್ಲಿ ಹರಿಯಾಣದ ಬಿಜೆಪಿ ಸರ್ಕಾರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement