ಲೋಕಸಭೆ ಚುನಾವಣೆ: ಸುಮಲತಾ ಭೇಟಿ ಮಾಡಿದ ಕುಮಾರಸ್ವಾಮಿ

ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ ಅವರ ನಿವಾಸಕ್ಕೆ ಭಾನುವಾರ (ಮಾ. 31ರಂದು) ಭೇಟಿ ನೀಡಿದ್ದಾರೆ.
ಈ ಸಂದರ್ಭದಲ್ಲಿ, ಸುಮಲತಾ ಅವರ ಪುತ್ರ ಅಭಿಷೇಕ ಅಂಬರೀಶ ಇದ್ದರು. ಮಂಡ್ಯದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ (BJP JDS Alliance) ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಚ್‌.ಡಿ ಕುಮಾರಸ್ವಾಮಿ ಅವರು ಮುನಿಸು ಮರೆತು ಸಂಸದೆ ಸುಮಲತಾ ಅವರ ಭೇಟಿಗೆ ಬೆಂಗಳೂರಿನ ಅವರ ನಿವಾಸಕ್ಕೆ ಆಗಮಿಸಿದ್ದರು. ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾದ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿರುವ ಸುಮಲತಾ ಅವರ ನಿವಾಸಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರನ್ನು ಪುತ್ರ ಅಭಿಷೇಕ ಮತ್ತು ಚಲನಚಿತ್ರ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ ಅವರು ಸ್ವಾಗತಿಸಿದರು. ನಂತರ ಸುಮಲತಾ ಅವರು ಸ್ವಾಗತಿಸಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಈ ವೇಳೆ ಕುಮಾರಸ್ವಾಮಿ ಹಾಗೂ ಸುಮಲತಾ ಅವರ ನಡುವೆ ಮಾತಿನ ಸಮರ ನಡೆದಿತ್ತು. ಈಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಸುಮಲತಾ ಅವರು ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬೆಂಬಲಿಸುವಂತೆ ಸುಮಲತಾ ಅವರಿಗೆ ಮನವಿ ಮಾಡಿದ್ದಾರೆ ಹಾಗೂ ಅವರ ಸಹಕಾರ ಕೋರಿದ್ದಾರೆ. ಸುಮಲತಾ ಅಂಬರೀಶ, ಪುತ್ರ ಅಭಿಷೇಕ ಹಾಗೂ ಅಂಬರೀಶ್‌ ಹಾಗೂ ರಾಕ್‌ಲೈನ್‌ ವೆಂಕಟೇಶ ಸಮ್ಮುಖದಲ್ಲಿ ಕುಮಾರಸ್ವಾಮಿ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

ಭೇಟಿ ಬಳಿಕ ಅಂಬರೀಶ ನಿವಾಸದ ಮುಂದೆ ಮಾಧ್ಯಮದವರ ಜೊತೆ ಮಾತನಾಡಿದ ಕುಮಾರಸ್ವಾಮಿ, ಮಂಡ್ಯ ಕ್ಷೇತ್ರದಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದೇನೆ. ಅತ್ಯಂತ ಸೌಹಾರ್ದಯುತವಾಗಿ ಭೇಟಿಯಾಗಿದೆ. ಎಲ್ಲ ಮುಕ್ತವಾಗಿ ಚರ್ಚೆ ಮಾಡಿದ್ದೇವೆ. ಸುಮಲತಾ ಜೊತೆ ಬಿಜೆಪಿ ವರಿಷ್ಠರು, ಬಿಎಸ್​ ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ ಅವರು ಸಹ ಚರ್ಚಿಸಿದ್ದಾರೆ ಎಂದು ಹೇಳಿದ್ದಾರೆ.
ಏ. 4ರಂದು ಮಂಡ್ಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದೇನೆ. ಏ. 3ರಂದು ಸುಮಲತಾ ಮಂಡ್ಯದಲ್ಲಿ ಬೆಂಬಲಿಗರ ಸಭೆ ಕರೆದಿದ್ದಾರೆ. ಬೆಂಬಲಿಗರು, ಕಾರ್ಯಕರ್ತರು, ಹಿತೈಷಿಗಳ ಜೊತೆ ಚರ್ಚಿಸಿದ ಬಳಿಕ ತಮ್ಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ. ಅಂಬರೀಶ ಅಣ್ಣನ ಮನೆ ನನಗೆ ಹೊಸದೇನಲ್ಲ. ನಾನು, ಅಂಬರೀಶ ಅವರು ಒಟ್ಟಿಗೆ ಉಂಡು ಬೆಳೆದವರು ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಭೇಟಿ ನಂತರ ಮಂಡ್ಯ ಸಂಸದೆ ಸುಮಲತಾ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಭೇಟಿ ವೇಳೆ ಆರೋಗ್ಯಕರ ಚರ್ಚೆಯಾಗಿದೆ. ಈ ವೇಳೆ ನನ್ನ ಹಾಗೂ ಅವರ ಸ್ಪರ್ಧೆ ಬಗ್ಗೆ ಚರ್ಚೆ ನಡೆದಿಲ್ಲ. ಹಳೆಯದನ್ನು ಮನಸಿನಲ್ಲಿಟ್ಟುಕೊಳ್ಳಬೇಡಿ ಎಂದು ಅವರು ಹೇಳಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಸಹಕಾರ ನೀಡುವಂತೆ ಅವರು ಮನವಿ ಮಾಡಿದ್ದಾರೆ. ಆದರೆ ಏ. 3ರಂದು ಮಂಡ್ಯದಲ್ಲಿ ಬೆಂಬಲಿಗರ ಸಭೆ ಕರೆದಿರುವ ಬಗ್ಗೆ ತಿಳಿಸಿದ್ದೇನೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement