ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗೂಂಡಾ, ರೌಡಿ ಎಂದು ಕರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಶಿಲ್ಪಾ ನಾಗ್ ನೋಟಿಸ್ ಜಾರಿ ಮಾಡಿದ್ದಾರೆ. ಆಕ್ಷೇಪಾರ್ಹ ಹೇಳಿಕೆ ಬಗ್ಗೆ ವಿವರಣೆ ಕೇಳಲಾಗಿದೆ. ಸಹಾಯಕ ಚುನಾವಣಾಧಿಕಾರಿ, ಮಾದರಿ ನೀತಿ ಸಂಹಿತೆ ನೂಡಲ್ ಅಧಿಕಾರಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳಿಂದ ವರದಿ ಪಡೆದು ನೋಟಿಸ್ ಜಾರಿಗೊಳಿಸಲಾಗಿದೆ.
ಜಿಲ್ಲೆಯ ಹನೂರಿನಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಯತೀಂದ್ರ ಅವರು ಗೃಹ ಸಚಿವ ಅಮಿತ್ ಶಾ ವಿರುದ್ಧ ಹರಿಹಾಯ್ದಿದ್ದರು. ‘ಅವರೊಬ್ಬ, ಗೂಂಡಾ, ರೌಡಿ. ಗುಜರಾತ್‌ನಲ್ಲಿ ಅವರ ಮೇಲೆ ಕೊಲೆ ಪ್ರಕರಣಗಳಿವೆ. ಅಂತಹವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ’ ಎಂದು ಟೀಕಾ ಪ್ರಹಾರ ನಡೆಸಿದ್ದರು. ಈ ಹೇಳಿಕೆ ವಿರೋಧಿಸಿ ಬಿಜೆಪಿ ಯತೀಂದ್ರ ವಿರುದ್ಧ ಚುನಾವಣಾ ಅಧಿಕಾರಿಗೆ ದೂರು ನೀಡಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ