ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆ.ಜಿ ವಾಣಿಜ್ಯ ಸಿಲಿಂಡರ್ ಮತ್ತು 5 ಕೆ.ಜಿ ಎಫ್‌ಟಿಎಲ್ (Free Trade LPG) ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿವೆ.
19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗೆ ₹ 30.50 ಇಳಿಕೆಯಾಗಿದ್ದರೆ 5 ಕೆ.ಜಿ ಎಫ್‌ಟಿಎಲ್ ಸಿಲಿಂಡರ್ ಬೆಲೆಯಲ್ಲಿ ₹7.50 ಇಳಿಕೆಯಾಗಿದೆ.
ಪರಿಷ್ಕೃತ ದರಗಳು ಏಪ್ರಿಲ್ 1ರಿಂದ ಅನ್ವಯವಾಗಲಿದೆ. ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಸಿಲಿಂಡರ್ ಬೆಲೆ ₹ 1764.50 ರೂ.ಗಳಾಗಲಿದೆ. ಮುಂಬೈನಲ್ಲಿ 1,749 ರೂ.ನಿಂದ 1,717.50 ರೂ.ಗೆ ಇಳಿಕೆಯಾಗಿದೆ. ಚೆನ್ನೈನಲ್ಲಿ 30 ರೂ. ಇಳಿಕೆಯಾಗಿದೆ. ಪ್ರಸ್ತುತ ಬೆಲೆ 1,960.50 ರಿಂದ 1,930 ರೂ.ಗಳಿಗೆ ಇಳಿಕೆಯಾಗಲಿದೆ. ಏತನ್ಮಧ್ಯೆ, ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,911 ರೂ.ನಿಂದ 1,879 ರೂ.ಗಳಿಗೆ ಇಳಿಕೆಯಾಗಲಿದೆ.
ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಅವರು ಗೃಹಬಳಕೆಯ 14 ಕೆ.ಜಿ ಯ ಸಿಲಿಂಡರ್‌ಗಳ ಬೆಲೆಯನ್ನು ₹100 ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಇದು ಮಹಿಳಾ ದಿನಾಚರಣೆಯ ಉಡುಗೊರೆಯೂ ಆಗಲಿದೆ ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ