ಸರ್ವರಿಗೂ ಕ್ರೋಧಿ ಸಂವತ್ಸರದ ಯುಗಾದಿಯ ಹಾರ್ದಿಕ ಶುಭಾಶಯಗಳು

ಎಂಥಾ ಲೋಕವಯ್ಯ…! ಪತಿಯನ್ನು ಕೊಂದವರಿಗೆ ₹ 50 ಸಾವಿರ ಬಹುಮಾನ ನೀಡುವೆ : ವಾಟ್ಸಾಪ್‌ನಲ್ಲಿ ಸ್ಟೇಟಸ್ ಹಾಕಿಕೊಂಡ ಮಹಿಳೆ…!

ಲಕ್ನೋ: ಪತಿಯನ್ನು ಕೊಲೆ ಮಾಡಿದವರಿಗೆ ₹50 ಸಾವಿರ ನಗದು ಬಹುಮಾನ ನೀಡಲಾಗುವುದು’ ಎಂದು ಮಹಿಳೆಯೊ‌ಬ್ಬರು ತಮ್ಮ ವಾಟ್ಸ್‌ಆಪ್‌ ಖಾತೆಯಲ್ಲಿ ಸ್ಟೇಟಸ್‌ ಹಾಕಿಕೊಂಡಿದ್ದಾರೆ.
ಉತ್ತರ ಪ್ರದೇಶದ ಆಗ್ರಾದ ಬಹ್ ಜಿಲ್ಲೆಯ ದಂಪತಿ ನಡುವಿನ ಭಿನ್ನಾಭಿಪ್ರಾಯ ಎಷ್ಟು ತೀವ್ರವಾಗಿದೆಯೆಂದರೆ, ಪತಿ ಹತ್ಯೆಗೆ ಪತ್ನಿ ₹ 50,000 ಬಹುಮಾನ ಘೋಷಿಸಿದ್ದಾರೆ. ಆಕೆ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಈ ಆಫರ್ ನೀಡಿದ್ದಾಳೆ…!! ಇಚ್ಛೆಗೆ ವಿರುದ್ಧವಾಗಿ ತನಗೆ ಮದುವೆ ಮಾಡಲಾಗಿದೆ ಎಂದೂ ಬರೆದುಕೊಂಡಿದ್ದಾರೆ. ಪತ್ನಿಯ ‘ಸ್ಟೇಟಸ್’ ನೋಡಿ ಗಾಬರಿಗೊಂಡ ಪತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆಯ ಈ ಸ್ಟೇಟಸ್‌ ಆಕೆಯ ಸ್ನೇಹಿತರು ಮತ್ತು ಸಂಬಂಧಿಕರಲ್ಲಿಯೂ ಆತಂಕ ಮೂಡಿಸಿದೆ.
ತನ್ನ ಪತ್ನಿಯ ಸ್ಟೇಟಸ್‌ ನೋಡಿದ ನಂತರ ಪತಿರಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಹಿಂದೆ ಪತ್ನಿಯ ಸ್ನೇಹಿತರೊಬ್ಬರು ತನಗೆ ಬೆದರಿಕೆ ಹಾಕಿದ್ದರು ಎಂದು ಪತಿ ದೂರಿನಲ್ಲಿ ಆರೋಪಿಸಿದ್ದಾರೆ. ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಬಹ್ ಪೊಲೀಸ್ ಠಾಣೆಯ ಉಸ್ತುವಾರಿ ಶ್ಯಾಮ್ ಸಿಂಗ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸಾರ್ವಜನಿಕರ ಖರೀದಿಗಾಗಿ ಅಯೋಧ್ಯಾ ರಾಮಲಲ್ಲಾ ಬೆಳ್ಳಿ ನಾಣ್ಯ ಬಿಡುಗಡೆ ಮಾಡಿದ ಮೋದಿ ಸರ್ಕಾರ

ದೂರಿನಲ್ಲಿ ಉಲ್ಲೇಖಿಸಿರುವಂತೆ, ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಮಹಿಳೆಗೆ ಜುಲೈ 9, 2022 ರಂದು ಉತ್ತರಪ್ರದೇಶ ಆಗ್ರಾ ಜಿಲ್ಲೆಯ ಬಾಹ್‌ನ ಯುವಕನ ಜೊತೆಗೆ ವಿವಾಹವಾಗಿತ್ತು. ಸ್ವಲ್ಪ ಸಮಯದ ನಂತರ ಪತಿ-ಪತ್ನಿ ನಡುವೆ ಭಿನ್ನಾಭಿಪ್ರಾಯ ಉಂಟಾಯಿತು. ಐದು ತಿಂಗಳು ದಾಂಪತ್ಯ ನಡೆಸಿದ ನಂತರ, ಡಿಸೆಂಬರ್ 2022 ರಲ್ಲಿ, ಮಹಿಳೆ ಬಾಹ್‌ನಲ್ಲಿರುವ ತನ್ನ ಗಂಡನ ಮನೆಯನ್ನು ತೊರೆದು ತನ್ನ ತಾಯಿ ಮನೆಗೆ ಬಂದಿದ್ದಾಳೆ. ಅಂದಿನಿಂದ ಮಹಿಳೆ ತನ್ನ ಪೋಷಕರೊಂದಿಗೆ ನೆಲೆಸಿದ್ದಾಳೆ. ಅಲ್ಲದೆ, ಜೀವನಾಂಶ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೂ ದೂರು ನೀಡಿದ್ದರು.

ಡಿಸೆಂಬರ್ 21, 2023 ರಂದು ಭಿಂಡ್‌ನಿಂದ ಹಿಂದಿರುಗುತ್ತಿದ್ದಾಗ ತನ್ನಪತ್ನಿಯ ಸಂಬಂಧಿಕರು ತನಗೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪತಿ ಹೇಳಿಕೊಂಡಿದ್ದಾರೆ. ಇದಾದ ಕೆಲವೇ ದಿನಗಳಲ್ಲಿ ಆತನ ಪತ್ನಿ ತನ್ನ ಪತಿಯನ್ನು ಕೊಲ್ಲುವ ವ್ಯಕ್ತಿಗೆ ₹ 50,000 ಬಹುಮಾನ ನೀಡುವುದಾಗಿ ವಾಟ್ಸಾಪ್ ಸ್ಟೇಟಸ್ ಅನ್ನು ಹಾಕಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ‘ಪತಿಯನ್ನು ಕೊಂದವರಿಗೆ ₹ 50,000 ಬಹುಮಾನ ನೀಡಲಾಗುವುದು’ ಎಂದು ಪತ್ನಿಯ ಸ್ಟೇಟಸ್‌ ಬರೆಯಲಾಗಿದೆ ಎಂದು ದಾಖಲಾದ ದೂರಿನಲ್ಲಿ ಪತಿ ಉಲ್ಲೇಖಿಸಿದ್ದಾರೆ.

ಪ್ರಮುಖ ಸುದ್ದಿ :-   ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ

ಈಟಿವಿ ಭಾರತ್ ವರದಿಯ ಪ್ರಕಾರ, ತನ್ನ ಹೆಂಡತಿಯು ವ್ಯಕ್ತಿಯೊಬ್ಬರ ಜೊತೆ ಸಂಬಂಧ ಹೊಂದಿದ್ದಾಳೆ, ಅವರನ್ನು ಮದುವೆಯಾಗಲು ವಿಚ್ಛೇದನ ಬಯಸಿದ್ದಾಳೆ ಎಂದು ಪತಿ ಆರೋಪಿಸಿದ್ದಾರೆ. ಆಕೆಯ ಪ್ರಿಯಕರ ಕೂಡ ದೂರವಾಣಿ ಕರೆ ಮೂಲಕ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಅವರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.
ವಾಟ್ಸ್‌ಆಪ್ ಸ್ಟೇಟಸ್‌ ಪ್ರಕರಣ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement